Advertisement
ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕ ಶಂಕರ್ ರಾಮನ್, “ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಜನರಿಂದ ಮೆಚ್ಚುಗೆ ಪಡೆದಿದೆ. ಇದೊಂದು ಆ್ಯಕ್ಷನ್ ಚಿತ್ರ. ಚಿತ್ರದಲ್ಲಿ ಆ್ಯಕ್ಷನ್ ಹೇಗಿರುತ್ತದೆ ಎಂದು ತೋರಿಸು ವುದಕ್ಕೆ ಈ ಟೀಸರ್ ಬಿಡುಗಡೆ ಮಾಡಿದ್ದೇವೆ. ಈ ಚಿತ್ರದಲ್ಲಿ ಒಟ್ಟು ನಾಲ್ಕು ಫೈಟ್‌ಗಳಿವೆ. ಮೂರು ಫೈಟ್ ಗಳಿಗೆ ಅರ್ಜುನ್ ರಾಜ್ ಸಾಹಸ ನಿರ್ದೇಶನ ಮಾಡಿದ್ದಾರೆ. ಇನ್ನೊಂದು ಫೈಟ್‌ನಲ್ಲಿ ಕಥೆ ಜೊತೆಜೊತೆಯಾಗಿ ಸಾಗುತ್ತದೆ. ಈ ಫೈಟ್ ಪ್ರೇಕ್ಷಕರಿಗೆ ಬೇರೆ ತರಹದ ಅನುಭವ ಕೊಡುತ್ತದೆ ಎಂಬ ನಂಬಿಕೆ ನನಗಿದೆ. ಸಾಹಸ ದೃಶ್ಯವನ್ನು ವಿಕ್ರಮ್ ಮೋರ್ ನಿರ್ದೇಶನ ಮಾಡಿದ್ದಾರೆ. ಅರ್ಜುನ್ ರಾಜ್ ಮತ್ತು ವಿಕ್ರಮ್ ಮೋರ್ ಜೊತೆಗೆ ಜಾಲಿ ಬಾಸ್ಟಿನ್ ಅವರ ನೆರವು ಮತ್ತು ಮಾರ್ಗದರ್ಶನವಿದೆ. ಈ ಮೂವರೂ ಸಾಹಸ ನಿರ್ದೇಶಕರಿಗೆ ನಮ್ಮ ಚಿತ್ರತಂಡದಿಂದ ಧನ್ಯವಾದಗಳು.”ವಾಮನ’ ಚಿತ್ರವನ್ನು ಸೆಪ್ಟೆಂಬರ್ ನಲ್ಲಿ ಬಿಡುಗಡೆ ಮಾಡುವ ಯೋಚನೆ ಇದೆ. ಧನ್ವೀರ್ ಅವರ ಚಿತ್ರ ಬಿಡುಗಡೆಗೆ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಭಿಮಾನಿಗಳಿಗೆ ಈ ಸಿನಿಮಾ ಹಬ್ಬ ಆಗುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ. ವಾಮನ ಅಂದರೆ ದಶಾವತಾರದಲ್ಲಿ ಬರುವ ಐದನೇ ಅವತಾರ. ದುಷ್ಟತ್ವವೇ ಸರ್ವಸ್ವ ಎನ್ನುವ ಜನರ ವಿರುದ್ಧ ವಾಮನ ಹೇಗೆ ಹೋರಾಡುತ್ತಾನೆ ಎಂಬುದು ಚಿತ್ರದ ಕಥೆ. ಇಲ್ಲಿ ರೌಡಿಸಂ, ಭೂಗತಲೋಕ ಮತ್ತು ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಕಥೆ ಸಾಗುತ್ತಿದೆ. ಈ ಚಿತ್ರದ ಹೈಲೈಟ್ ಅಂದರೆ ಸೆಂಟಿಮೆಂಟ್ ದೃಶ್ಯಗಳು. ಈ ಚಿತ್ರದಲ್ಲಿ ಒಂದು ಅದ್ಭುತವಾದ ಸಂದೇಶವಿದೆ’ ಎಂದರು.
Related Articles
Advertisement