Advertisement
ಪ್ರಸ್ತುತ ವಂದೇ ಭಾರತ್ ರೈಲುಗಳಲ್ಲಿ ಕೆಲಸ ಮಾಡುತ್ತಿರುವ ಶ್ರೀಮತಿ ಮೆನನ್ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಜನ ಶತಾಬ್ದಿಯಂತಹ ವಿವಿಧ ರೈಲುಗಳನ್ನು ಪ್ರಾಯೋಗಿಕವಾಗಿ 2 ಲಕ್ಷಕ್ಕೂ ಹೆಚ್ಚು ಫುಟ್‌ಪ್ಲೇಟ್ ಗಂಟೆಗಳನ್ನು ಪೂರ್ಣಗೊಳಿಸಿದ್ದಾರೆ.
Related Articles
Advertisement
ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಸುರೇಖಾ ಯಾದವ್ ಅವರು ಕೂಡಾ ಪ್ರಮಾಣ ವಹಚ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್-ಸೋಲಾಪುರದಿಂದ ವಂದೇ ಭಾರತ್ ರೈಲನ್ನು ಪೈಲಟ್ ಮಾಡುತ್ತಿರುವ ಸುರೇಖಾ ಯಾದವ್, ಸಮಾರಂಭಕ್ಕೆ ಆಹ್ವಾನಿಸಲಾದ ಹತ್ತು ಲೋಕೋ ಪೈಲಟ್ ಗಳಲ್ಲಿ ಸೇರಿದ್ದಾರೆ ಎಂದು ವರದಿಯಾಗಿದೆ.
ಅವರು 1988ರಲ್ಲಿ ಏಷ್ಯಾದ ಮೊದಲ ಮಹಿಳಾ ಲೋಕೋ ಪೈಲಟ್ ಎಂಬ ಖ್ಯಾತಿಗೆ ಭಾಜರಾದರು. ಅವರು ಸೆಮಿ ಹೈಸ್ಪೀಡ್ ರೈಲು ವಂದೇ ಭಾರತ್ ಎಕ್ಸ್ ಪ್ರೆಸ್ ನ ಮೊದಲ ಮಹಿಳಾ ಲೋಕೋ ಪೈಲಟ್ ಕೂಡಾ ಹೌದು.
ನೈರ್ಮಲ್ಯ ಕಾರ್ಯಕರ್ತರು, ತೃತೀಯ ಲಿಂಗಿಗಳು ಮತ್ತು ಸೆಂಟ್ರಲ್ ವಿಸ್ಟಾ ಯೋಜನೆಯಲ್ಲಿ ಕೆಲಸ ಮಾಡಿದ ಕಾರ್ಮಿಕರು ಹೊಸ ಸರ್ಕಾರದ ಪ್ರಮಾಣ ವಚನ ಸಮಾರಂಭದಲ್ಲಿ ವಿಶೇಷ ಅತಿಥಿಗಳಾಗಿರುತ್ತಾರೆ ಎಂದು ಮೂಲಗಳು ತಿಳಿಸಿವೆ.