Advertisement

ವಂದೇ ಭಾರತ್ ಸೆಮಿ ಹೈಸ್ಪೀಡ್ ರೈಲಿಗೆ ದಾವಣಗೆರೆಯಲ್ಲಿ ಅದ್ಧೂರಿ ಸ್ವಾಗತ

02:31 PM Jun 27, 2023 | Team Udayavani |

ದಾವಣಗೆರೆ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿತ, ಮೇಕ್ ಇನ್ ಇಂಡಿಯಾ ನಿರ್ಮಿತ ವಂದೇ ಭಾರತ್ ಸೆಮಿ ಹೈ ಸ್ಪೀಡ್ ರೈಲಿಗೆ ದಾವಣಗೆರೆಯಲ್ಲಿ ಅದ್ಧೂರಿ ಮತ್ತು ಅಭೂತಪೂರ್ವ ಸ್ವಾಗತ ಕೋರಲಾಯಿತು.

Advertisement

ಧಾರವಾಡದಿಂದ ದಾವಣಗೆರೆ ರೈಲು ನಿಲ್ದಾಣಕ್ಕೆ ಆಗಮಿಸಿದಾಗ ಜನರು ಹರ್ಷೋದ್ಘಾರ ಮೊಳಗಿಸಿದರು. ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ವಂದೇ ಮಾತರಂ, ಭಾರತ್ ಮಾತಾ ಕೀ ಜೈ ಘೋಷಣೆ ಮೊಳಗಿದವು. ರೈಲು ಒಳಗೆ ಹೋಗಿ ಬರಲು ಹತ್ತು ನಿಮಿಷದ ಕಾಲವಕಾಶ ನೀಡಲಾಗಿತ್ತು. ಜನರು ರೈಲು ಕೋಚ್, ಜಿಪಿಎಸ್ ಸೌಲಭ್ಯ ನೋಡಿ ಖುಷಿಪಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಡಾ. ಜಿ.ಎಂ‌.ಸಿದ್ದೇಶ್ವರ, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಏಕಕಾಲದಲ್ಲಿ ಐದು ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಎರಡು, ಗೋವಾ ಹಾಗೂ ಕರ್ನಾಟಕದಲ್ಲಿ ಒಂದು ವಂದೇ ಭಾರತ್ ರೈಲು ಸಂಚರಿಸುತ್ತಿವೆ. ವಂದೇ ಭಾರತ್ ನಲ್ಲಿ ವಿಶ್ವದರ್ಜೆಯ ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸೌಲಭ್ಯಗಳನ್ನು ಹೊಂದಿದೆ. ಪ್ರಯಾಣಿಕರು ಸೌಲಭ್ಯ ವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ:ಎಷ್ಟೇ ಕಷ್ಟವಾದರೂ ಐದು ಯೋಜನೆ ಜಾರಿ ಗ್ಯಾರಂಟಿ: ಸಿದ್ದರಾಮಯ್ಯ ಪುನರುಚ್ಛಾರ

ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ರೈಲ್ವೆ ಇಲಾಖೆಯಲ್ಲಿ ಮಹತ್ವ ಮತ್ತು ಮಹತ್ತರ ಕ್ರಾಂತಿ ಆಗಿದೆ. 2014 ರಲ್ಲಿ 600 ಕಿಲೋಮೀಟರ್ ಜೋಡಿ ಮಾರ್ಗ ನಿರ್ಮಾಣ ಆಗುತ್ತಿತ್ತು. ಈಗ 1392 ಕಿಲೋಮೀಟರ್ ಆಗುತ್ತಿದೆ. 9 ವರ್ಷಗಳಲ್ಲಿ 37 ಸಾವಿರ ಕಿಲೋಮೀಟರ್ ವಿದ್ಯುದ್ದೀಕರಣ ಆಗುತ್ತದೆ ಎಂದು ಮಾಹಿತಿ ನೀಡಿದರು.

Advertisement

ಮೇಯರ್ ಬಿ.ಎಚ್. ವಿನಾಯಕ ಪೈಲ್ವಾನ್, ಉಪ ಮೇಯರ್ ಯಶೋಧ, ಡಿಜಿಎಂ ಶಿಲ್ಪಿ ಅಗರವಾಲ್ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next