Advertisement
ಅಮೃತ್ ಯೋಜನೆಯಂತೆ ವಾರಾಹಿಯಿಂದ ಶುದ್ಧೀಕರಿಸದೆ ಇದ್ದ ನೀರನ್ನು ಪೈಪ್ ಮೂಲಕ ತಂದು ಬಜೆಯಲ್ಲಿ ಇರುವ ಶುದ್ಧೀಕರಣ ಘಟಕಕ್ಕೆ ತಂದು ಅಲ್ಲಿ ಶುದ್ಧೀಕರಣ ಮಾಡಿ ಅಲ್ಲಿಂದ ಮಣಿಪಾಲಕ್ಕೆ ನೀರು ಕೊಂಡೊಯ್ಯುವ ಯೋಜನೆ ಸಿದ್ಧಪಡಿಸಲಾಗಿತ್ತು. ಆದರೆ ಇದಕ್ಕೆ ರೈತ ಸಂಘದವರು ಅರ್ಜಿ ಸಮಿತಿಗೆ ಆಕ್ಷೇಪಣೆ ಸಲ್ಲಿಸಿದ್ದರು.
Related Articles
Advertisement
ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಉಡುಪಿ ನಗರಕ್ಕೆ ಕುಡಿಯುವ ನೀರು ಒದಗಿಸುವ ವಾರಾಹಿ ಯೋಜನೆಗೆ ಇಂದು ತಾರ್ಕಿಕ ಅಂತ್ಯ ಕಂಡಿದೆ. ಮತ್ತು ತಕ್ಷಣ ಕಾಮಗಾರಿ ಪ್ರಾರಂಭಿಸಲು ಮರು ಟೆಂಡರ್ ಕರೆದು ಕಾಮಗಾರಿಯನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಅಧ್ಯಕ್ಷರಾದ ಬಸವರಾಜ ಹೊರಟ್ಟಿಯವರು ಟೆಂಡರ್ ಕರೆದು ಕಾಮಗಾರಿ ಆರಂಭವಾದ ಬಗ್ಗೆ ವರದಿಯನ್ನು ಅರ್ಜಿ ಸಮಿತಿಗೆ ನೀಡಬೇಕೆಂದು ಸೂಚಿಸಿದರು.
ಶಾಸಕ ಕೆ. ರಘುಪತಿ ಭಟ್ ಈ ಸಭೆಯಲ್ಲಿ ಭಾಗವಹಿಸಿದ್ದು, ಉಡುಪಿಯಲ್ಲಿ ಕುಡಿಯುವ ನೀರಿನ ಬಗ್ಗೆ ವಿವರಿಸಿ ತಕ್ಷಣ ಕೆಲಸ ಕೈಗೊಳ್ಳುವಂತೆ ಅಧಿಕಾರಿಗೆ ಸೂಚಿಸಿದರು. ಉಡುಪಿ ನಗರದಲ್ಲಿ ನೀರಿನ ಸಮಸ್ಯೆ ಅತಿಯಾಗಿರುವುದರಿಂದ ಕೂಡಲೇ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.
ಇಂದಿನ ಸಭೆ ಬಹಳ ವರ್ಷದಿಂದ ಕಾಡುತ್ತಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ಸಿಕ್ಕಂತಾಗಿದೆ ಎಂದು ಶಾಸಕ ರಘುಪತಿ ಭಟ್ ಅಭಿಪ್ರಾಯವ್ಯಕ್ತಪಡಿಸಿದರು..
ಈ ಸಭೆಯಲ್ಲಿ ಅರ್ಜಿ ಸಮಿತಿ ಸದಸ್ಯರು, ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಜ್, ಬೃಹತ್ ನೀರಾವರಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, kuidfc ಎಂಡಿ ಇಬ್ರಾಹಿಂ, ಇನ್ನಿತರ ನಗರಾಭಿವೃದ್ಧಿ ಇಲಾಖೆಯ ಅಧಿಕಾರಿಗಳು ಮತ್ತು kuidfcನ ಅಧಿಕಾರಿಗಳು ಭಾಗವಹಿಸಿದ್ದರು.