Advertisement

ಕಾಪು, ಕಾರ್ಕಳ ಕ್ಷೇತ್ರಕ್ಕೆ ವಾರಾಹಿ ನೀರು: ಸಚಿವ ಸುನಿಲ್‌

01:09 AM Jan 03, 2022 | Team Udayavani |

ಕಾಪು: ಕಾಪು ಮತ್ತು ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ ವಾರಾಹಿಯಿಂದ 1,100 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಪೂರೈಸುವ ಮಹತ್ವದ ಯೋಜನೆಗೆ ಡಿಪಿಆರ್‌ ಸರ್ವೆ ನಡೆಸಿ ಪ್ರಸ್ತಾವನೆ ಸಲ್ಲಿಸಲಾಗಿದೆ.

Advertisement

ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಚರ್ಚಿಸಿ, ಯೋಜನೆಗೆ ಅನುಮೋದನೆ ಪಡೆಯಲಾಗುವುದು. ಜತೆಗೆ ಕಾಪು ಸೇರಿದಂತೆ ಕರಾವಳಿ ಯನ್ನು ಕಾಡುತ್ತಿರುವ ಪ್ರಾಧಿಕಾರದ ಸಮಸ್ಯೆ, ಒಳಚರಂಡಿ ಯೋಜನೆ ಮುಂತಾದ ಸಮಸ್ಯೆಗಳನ್ನು ಶೀಘ್ರ ಬಗೆಹರಿಸಲಾಗುವುದು ಎಂದು ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಹೇಳಿದರು.

ಜ. 2ರಂದು ಕಾಪುವಿನಲ್ಲಿ ಕಾಪು ಕ್ಷೇತ್ರ ಬಿಜೆಪಿಯ ವತಿಯಿಂದ ಆಯೋಜಿಸಲಾಗಿದ್ದ ಪುರಸಭೆ ಚುನಾವಣೆಯಲ್ಲಿ ವಿಜೇತರಾದ ಸದಸ್ಯರು ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳ ಅಭಿನಂದನ ಸಮಾರಂಭದಲ್ಲಿ ಅವರು ಮಾತನಾಡಿದರು.

ನವ ಕಾಪು ನಿರ್ಮಾಣದ ಸಂಕಲ್ಪಕ್ಕೆ ಮತದಾರರು ಪೂರ್ಣ ಬಹುಮತ ನೀಡಿದ್ದು ಅದಕ್ಕೆ ಪೂರಕವಾಗಿ ಚುನಾವಣೆಯ ಸಂದರ್ಭ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸಲು ಬದ್ಧರಾಗಿ ನಾವು ಕಾರ್ಯನಿರ್ವಹಿಸಬೇಕಿದೆ ಎಂದರು.

ಇದನ್ನೂ ಓದಿ:ನಿಮ್ಮ ಫೋನನ್ನು ನಮಗೊಪ್ಪಿಸಿ; ಸುಪ್ರೀಂಕೋರ್ಟ್‌ ನೇಮಿಸಿದ ತಾಂತ್ರಿಕ ಸಮಿತಿ ಸೂಚನೆ

Advertisement

ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಲಾಲಾಜಿ ಆರ್‌. ಮೆಂಡನ್‌ ಮಾತನಾಡಿ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಪರಿಶ್ರಮ ಹಾಗೂ ಸಂಘಟನ ಚಾತುರ್ಯದಿಂದ ಬಿಜೆಪಿ ಪುರಸಭೆಯಲ್ಲಿ ಅಧಿಕಾರಕ್ಕೇರಿದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್‌, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಸುರೇಶ್‌ ಪಿ. ಶೆಟ್ಟಿ ಗುರ್ಮೆ, ಗೀತಾಂಜಲಿ ಎಂ. ಸುವರ್ಣ, ಹಿಂ. ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಮಹಿಳಾ ಮೋರ್ಚಾ ರಾಜ್ಯ ಪ್ರ. ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಎಸ್ಟಿ ಮೋರ್ಚಾದ ರಾಜ್ಯ ಪ್ರ. ಕಾರ್ಯದರ್ಶಿ ದಿನಕರ ಬಾಬು, ಜಿಲ್ಲಾ ಪ್ರ. ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ, ಚುನಾವಣ ಪ್ರಭಾರಿ ರವೀಂದ್ರ ಮಡಿವಾಳ, ಸಂದೀಪ್‌ ಶೆಟ್ಟಿ, ಪ್ರಮುಖರಾದ ಶೀಲಾ ಕೆ. ಶೆಟ್ಟಿ, ಪ್ರಕಾಶ್‌ ಶೆಟ್ಟಿ ಪಾದೆಬೆಟ್ಟು ಮೊದಲಾದವರು ಉಪಸ್ಥಿತರಿದ್ದರು.

ಕಾಪು ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್‌ ನಾಯಕ್‌ ಪ್ರಸ್ತಾ ವನೆಗೈದರು. ಉಪಾಧ್ಯಕ್ಷ ನವೀನ್‌ ಎಸ್‌.ಕೆ. ಅವರು ಸ್ವಾಗತಿಸಿದರು. ಪ್ರ. ಕಾರ್ಯದರ್ಶಿ ಗೋಪಾಲಕೃಷ್ಣ ರಾವ್‌ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next