Advertisement

Gyanvapi ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು ಎಎಸ್‌ಐಗೆ 10 ದಿನಗಳ ಗಡುವು

06:59 PM Nov 30, 2023 | Team Udayavani |

ವಾರಾಣಸಿ: ಇಲ್ಲಿನ ಜಿಲ್ಲಾ ನ್ಯಾಯಾಲಯವು ಗುರುವಾರ ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಪೂರ್ಣಗೊಳಿಸಿ  ವರದಿಯನ್ನು ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ASI )ಇನ್ನೂ 10 ದಿನಗಳ ಕಾಲಾವಕಾಶ ನೀಡಿದೆ.

Advertisement

ವರದಿಯನ್ನು ಸಲ್ಲಿಸಲು ಮೂರು ಹೆಚ್ಚುವರಿ ವಾರಗಳನ್ನು ಕೋರಿ ಎಎಸ್‌ಐ ಸಲ್ಲಿಸಿದ್ದ ಮನವಿಯನ್ನು ತಿರಸ್ಕರಿಸಿದ ಜಿಲ್ಲಾ ನ್ಯಾಯಾಧೀಶ ಎ ಕೆ ವಿಶ್ವೇಶ್ ”ಕಾರ್ಯವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕು ಮತ್ತು ಹೆಚ್ಚಿನ ಸಮಯವನ್ನು ನೀಡಲಾಗುವುದಿಲ್ಲ” ಎಂದು ಹೇಳಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 11 ರಂದು ನಡೆಸಲಾಗುತ್ತದೆ ಎಂದು ನ್ಯಾಯಾಲಯ ನಿಗದಿಪಡಿಸಿದೆ ಎಂದು ಹಿಂದೂ ಪರ ವಕೀಲ ಮದನ್ ಮೋಹನ್ ಯಾದವ್ ಹೇಳಿದರು.

17 ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯದ ಪೂರ್ವ ಅಸ್ತಿತ್ವದಲ್ಲಿರುವ ರಚನೆಯ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ನ್ಯಾಯಾಲಯದ ಆದೇಶಗಳನ್ನು ಅನುಸರಿಸಿ ASI ಆಗಸ್ಟ್ 4 ರಂದು ಜ್ಞಾನವಾಪಿ ಆವರಣದ ಬ್ಯಾರಿಕೇಡ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪ್ರಾರಂಭಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next