Advertisement

Varanasi; ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಕೆ ದಿನಾಂಕ ನಿಗದಿ

01:01 AM May 04, 2024 | Team Udayavani |

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಾರಾಣಸಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೇ 13ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ವೇಳೆ ಅವರು ಭಾರೀ ರೋಡ್‌ಶೋ ಹಮ್ಮಿಕೊಳ್ಳಲಿದ್ದಾರೆ ಎನ್ನಲಾಗಿದೆ. ವಾರಾಣಸಿಯಲ್ಲಿ ಜೂ.1ರಂದು ಚುನಾವಣೆ ನಡೆಯಲಿದ್ದು, ಇಲ್ಲಿ 7ನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಮೇ 7ರಂದು ಆರಂಭಗೊಳ್ಳಲಿದ್ದು, ಮೇ 14 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಕಾಂಗ್ರೆಸ್‌ ನಾಯಕ ಅಜಯ್‌ ರಾಯ್‌ ಅವರನ್ನು ಪ್ರಧಾನಿ ಮೋದಿ ಅವರ ಎದುರು ಕಣಕ್ಕಿಳಿಸಲಾಗಿದೆ. ಕಳೆದ 2 ಲೋಕಸಭೆ ಚುನಾವಣೆಗಳಲ್ಲೂ ಪ್ರಧಾನಿ ಮೋದಿ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಅಭೂತಪೂರ್ವ ಗೆಲುವು ಸಾಧಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next