ಲಕ್ನೋ: ಭಾರತೀಯ ಪುರಾತತ್ವ ಇಲಾಖೆಯು ಕಾಶಿಯ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಅಧಿಕಾರಿಗಳ ತಂಡ ಇಂದು (ಸೋಮವಾರ) ಆರಂಭಿಸಿದೆ.
ವಾರಣಾಸಿಯ ಜ್ಞಾನವಾಪಿ ಮಸೀದಿಯ ಪರಿಶೀಲನೆಗೆ ಅವಕಾಶ ನೀಡಿರುವ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶದ ವಿರುದ್ಧ ಮಸೀದಿ ಆಡಳಿತ ಸಮಿತಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಬೆನ್ನಲ್ಲೇ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ತಂಡ ಇಂದು ವಾರಣಾಸಿಯ ಜ್ಞಾನವಾಪಿ ಮಸೀದಿಯ ‘ವೈಜ್ಞಾನಿಕ ಸಮೀಕ್ಷೆ’ ಆರಂಭಿಸಿದೆ.
ವೈಜ್ಞಾನಿಕ ಸಮೀಕ್ಷೆ ನಡೆಸುವ ಹಿನ್ನೆಲೆಯಲ್ಲಿ ಮಸೀದಿ ಸುತ್ತ ಮುತ್ತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು ಇಲಾಖೆಯ ಸುಮಾರು 40 ತಜ್ಞರ ತಂಡದಿಂದ ಸಮೀಕ್ಷೆ ನಡೆಯಲಿದೆ ಎನ್ನಲಾಗಿದೆ.
ಜ್ಞಾನವಾಪಿ ಮಸೀದಿಯಲ್ಲಿನ ಸಮೀಕ್ಷೆಯ ಭಾಗವಾಗಿ ಶಿವಲಿಂಗದ ಕಾರ್ಬನ್ ಡೇಟಿಂಗ್ ಕುರಿತ ಆದೇಶವನ್ನು ಜಿಲ್ಲಾ ನ್ಯಾಯಾಲಯ ಜುಲೈ 21 ರಂದು ಪ್ರಕಟಿಸಿದ್ದು, ಎಎಸ್ಐ ಸಮೀಕ್ಷೆಯನ್ನು ನಡೆಸುವಂತೆ ಸೂಚಿಸಿತ್ತು ಅದರಂತೆ ಇಂದು ಬೆಳಿಗ್ಗೆಯಿಂದ ಸಮೀಕ್ಷೆ ಆರಂಭಗೊಂಡಿದೆ.
ಮಸೀದಿಯ ಒಳಗೆ ಪ್ರಾಚೀನ ಹಿಂದೂ ದೇವರುಗಳು ಇರುವುದು ಕಂಡುಬಂದಿದ್ದು ಇದು ವೈಜ್ಞಾನಿಕ ಸಮೀಕ್ಷೆಯಿಂದ ಮಾತ್ರ ಇದರ ಸತ್ಯ ಬಯಲಿಗೆ ಬರಲಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದರು. ಈ ಹಿನ್ನೆಲೆಯಲ್ಲಿ ಆಗಸ್ಟ್ 4ರೊಳಗೆ ಜಿಲ್ಲಾ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಆದೇಶಿಸಲಾಗಿದೆ.
ಇದನ್ನೂ ಓದಿ: ಚೀನಾ: ಜಿಮ್ ನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವೇಳೆ ಕುಸಿದ ಮೇಲ್ಛಾವಣಿ 10 ಮಂದಿ ಮೃತ್ಯು