Advertisement

ಮೈಸೂರು ಬಂದ್‌ಗೆ ನೀರಸ ಪ್ರತಿಕ್ರಿಯೆ

07:45 AM Nov 23, 2017 | Team Udayavani |

ಮೈಸೂರು: ಸಂವಿಧಾನದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಧಾನಪರಿಷತ್‌ ಮಾಜಿ ಸದಸ್ಯ ಗೋ.
ಮಧುಸೂದನ್‌ ಬಂಧನಕ್ಕೆ ಆಗ್ರಹಿಸಿ ಪೊಲೀಸರ ಅನುಮತಿ ನಿರಾಕರಣೆ ನಡುವೆಯೂ ಸಂವಿಧಾನ ಸಂರಕ್ಷಣಾ ಸಮಿತಿ, ದಲಿತ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಮೈಸೂರು ಬಂದ್‌ ನಗರದ ದೇವರಾಜ ಅರಸು ರಸ್ತೆಗೆ ಸೀಮಿತವಾಗಿತ್ತು.

Advertisement

ಮೈಸೂರು ಬಂದ್‌ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ, ಗ್ರಾಮಾಂತರ ಬಸ್‌ನಿಲ್ದಾಣ ಸೇರಿದಂತೆ ನಗರದ ಪ್ರಮುಖ ವೃತ್ತಗಳಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿ ಗೋ.ಮಧುಸೂದನ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಘಟನೆಗಳು. ಮೈಸೂರು- ಹುಣಸೂರು ಮುಖ್ಯರಸ್ತೆಯಲ್ಲಿ ಗಂಟೆಗೂ ಹೆಚ್ಚು ಕಾಲ ರಸ್ತೆತಡೆ ನಡೆಸಿದರು, ಪರಿಣಾಮ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡು, ಸಾರ್ವಜನಿಕರು ಪರದಾಡಿದರು.

ಪ್ರತಿಭಟನಾ ಮೆರವಣಿಗೆ ವೇಳೆ ಉರಿಲಿಂಗಿ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಅವರನ್ನು ಪೊಲೀಸ್‌ ಅಧಿಕಾರಿಯೊಬ್ಬರು ತಳ್ಳಿದರು ಎಂದು ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪೊಲೀಸರೊಂದಿಗೆ ಮಾತಿನ
ಚಕಮಕಿ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಗೊಂದಲ ವಾತಾವರಣ ನಿರ್ಮಾಣವಾಗಿತ್ತು, ಆದರೆ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ಪೊಲೀಸರು ಪ್ರತಿಭಟನಾಕಾರರನ್ನು ಸುಮ್ಮನಿರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next