ಬಸವಕಲ್ಯಾಣ: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಸೋಮವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಕಬ್ಬಿನ ಮೇಲೆ ಕೇಂದ್ರ ಸರ್ಕಾರದ ಎಫ್‌ಆರ್‌ಪಿ ಪ್ರಕಾರ ಪ್ರತಿಟನ್ ಕಬ್ಬಿಗೆ 2900 ರೂ. ನೀಡಬೇಕು ಮತ್ತು ಕಡಿಮೆ ರಿಕವರಿ ತೋರಿಸಿದ್ದಲ್ಲಿ ಸಹಿತ 2,755 ಕಡ್ಡಾಯವಾಗಿ ಕೊಡಬೇಕು ಮತ್ತು ಅತಿವೃಷ್ಟಿಯಿಂದ ಹಾಳಾದ ಬೆಳೆಗಳಿಗೆ ಪರಿಹಾರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ತಾಲೂಕಾಧ್ಯಕ್ಷ ರುದ್ರಯ್ನಾ ಸ್ವಾಮಿ, ಉಪಾಧ್ಯಕ್ಷ ಸಂತೋಷಕುಮಾರ ಎಸ್, ಗುದಗೆ, ಪ್ರಧಾನ ಕಾರ್ಯದರ್ಶಿ ಅಣವೀರ ಬಿರಾದಾರ್ ಸೇರಿದಂತೆ ಮತ್ತಿತರರು ಇದ್ದರು.