Advertisement
ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಸರಕಾರದ ಎಲ್ಲ ಇಲಾಖೆಗಳು ಮಂಗಳ ವಾರದಿಂದ ಕಾರ್ಯಾಚರಿಸಲಿದ್ದು, ಗ್ರೂಪ್ ಎ ಮತ್ತು ಬಿ ವರ್ಗ ಎಲ್ಲ ಅಧಿಕಾರಿಗಳು ಹಾಗೂ ಗ್ರೂಪ್ ಸಿ ಮತ್ತು ಡಿ ಶೇ.33ರಷ್ಟು ಸಿಬಂದಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
Related Articles
Advertisement
ದಕ್ಷಿಣ ಕನ್ನಡ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ,ಮುಡಾ,ಲೋಕೋಪಯೋಗಿ ಇಲಾಖೆ,ಮಿನಿ ವಿಧಾನಸೌಧ ಸಹಿತ ಎಲ್ಲ ಇಲಾಖೆಗಳು, ನಿಗಮ, ಮಂಡಳಿ, ಪ್ರಾಧಿಕಾರಗಳ ಅಧಿಕಾರಿ ಮತ್ತು ಸಿಬಂದಿ ಸೋಮವಾರದಿಂದ ಆಂಶಿಕ ಪ್ರಮಾಣದಲ್ಲಿ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ.
18 ಇಲಾಖೆಗಳಿಗೆ ರಜೆಯೇ ಇಲ್ಲ!
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ, ನಗರಾಭಿವೃದ್ಧಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಸಾರಿಗೆ, ಇಂಧನ, ಸಿಬಂದಿ ಮತ್ತು ಆಡಳಿತ ಸುಧಾರಣೆ (ಇ ಆಡಳಿತ), ಆರ್ಥಿಕ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ, ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ, ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ, ಕಾರ್ಮಿಕ ಇಲಾಖೆ ಮತ್ತು ತೋಟಗಾರಿಕಾ ಇಲಾಖೆಯ ಅಧಿಕಾರಿ, ಸಿಬಂದಿ ಲಾಕ್‌ಡೌನ್ ಸಂದರ್ಭದಲ್ಲಿಯೂ ಕರ್ತವ್ಯದಲ್ಲಿದ್ದರು. ಕರ್ತವ್ಯಕ್ಕೆ ಹಾಜರಾಗಲು ನಿರ್ದೇಶನ
ಕೋವಿಡ್ 19 ಸೇವೆಯಲ್ಲಿರುವ 18 ಇಲಾಖೆಗಳನ್ನು ಹೊರತುಪಡಿಸಿ, ಉಳಿದ ಇಲಾಖೆಗಳ ಸರಕಾರಿ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಎ, ಬಿಯ ಎಲ್ಲ ಅಧಿಕಾರಿಗಳು, ಗ್ರೂಪ್ ಸಿ ಮತ್ತು ಡಿಯ ಶೇ.33ರಷ್ಟು ಸಿಬಂದಿ ಎ. 20ರಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರದ ಮುಖ್ಯ ಕಾರ್ಯದರ್ಶಿ ನಿರ್ದೇಶಿಸಿದ್ದಾರೆ.
- ಖಾದರ್ ಶಾ, ಜಿಲ್ಲಾ ವಾರ್ತಾಧಿಕಾರಿ, ದ.ಕ.