Advertisement

KEA ಯಿಂದ ವಿವಿಧ ಪರೀಕ್ಷೆ, ಪ್ರವೇಶಪತ್ರ ಡೌನ್‌ಲೋಡ್‌ಗೆ ಅವಕಾಶ

08:42 PM Feb 09, 2024 | Pranav MS |

ಬೆಂಗಳೂರು: ಹಿಂದುಳಿದ ವರ್ಗಗಳ ಇಲಾಖೆ/ಸಮಾಜ ಕಲ್ಯಾಣ ಇಲಾಖೆ ಐಎಎಸ್‌, ಕೆಎಎಸ್‌, ಬ್ಯಾಂಕಿಂಗ್‌ ಪರೀಕ್ಷೆ ಬರೆಯಲು ಇಚ್ಛಿಸುವ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಫೆ.18ರಂದು ಪರೀಕ್ಷೆ ನಡೆಸಲಿದೆ. ಅರ್ಹ ಅಭ್ಯರ್ಥಿಗಳು ಹೆಸರು, ಜನ್ಮ ದಿನಾಂಕ, ಅರ್ಜಿ ಸಂಖ್ಯೆ ಮತ್ತು ಮೊಬೈಲ್‌ ಸಂಖ್ಯೆಯನ್ನು ಬಳಸಿ ಪ್ರಾಧಿಕಾರದ ವೆಬ್‌ಸೈಟ್‌ನಿಂದ ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್‌. ರಮ್ಯಾ ತಿಳಿಸಿದ್ದಾರೆ.
ಜತೆಗೆ ಕೆಇಎಯು ಕೆಪಿಸಿಎಲ್‌ ಸಂಸ್ಥೆಯ ನೇಮಕಾತಿ ಸಂಬಂಧ ಫೆ.18ರಂದು ಮರುಪರೀಕ್ಷೆ ಮತ್ತು 19ರಂದು ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಲಿದೆ.

Advertisement

ಕರ್ನಾಟಕ ರಾಜ್ಯ ಹಣಕಾಸು ನಿಗಮದ (ಕೆಎಸ್‌ಎಫ್ಸಿ) ಖಾಲಿ ಹುದ್ದೆಗಳಿಗೂ ನೇಮಕಾತಿಗಾಗಿ ಫೆ. 17ರಂದು ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳಿಗೂ ಅಭ್ಯರ್ಥಿಗಳು ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next