Advertisement

ವಿವಿಧೆಡೆ ಕಡ್ಡಾಯ ಮತದಾನ ಜಾಗೃತಿ: ಬೀದಿ ನಾಟಕ ಪ್ರದರ್ಶನ

03:11 PM Mar 26, 2019 | pallavi |

ದಾವಣಗೆರೆ: 17ನೇ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡಲು ಸಾರ್ವಜನಿಕರಲ್ಲಿ ವಿವಿಧೆಡೆ ಕಾರ್ಯಕ್ರಮಗಳ ಮೂಲಕ ಜಾಗೃತಿ ಮೂಡಿಸಲಾಗಿದೆ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೋಮವಾರ ಜಗಳೂರು ತಾಲೂಕು ಬಿಳಿಚೋಡು ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಬೋಧಕರು ಮತ್ತು ಕಲಿಕಾರ್ಥಿಗಳಿಗೆ ಸಾಕ್ಷರತೆ ಹಾಗೂ ಮತದಾನದ ಮಹತ್ವ ಮನವರಿಕೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಿ,
ಗ್ರಾಮದಲ್ಲಿ ಜಾಥಾ ನಡೆಸಲಾಯಿತು.

Advertisement

ಕಾರ್ಯಕ್ರಮದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಜಿ.ಆರ್‌.ತಿಪ್ಪೇಶಪ್ಪ ಹಾಗೂ ಕಾರ್ಯಕ್ರಮ ಸಹಾಯಕ ಟಿ.ಗುರುಶಾಂತಪ್ಪ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ರಮೇಶ್‌ ಮತ್ತು ಶ್ವೇತಾ ಇತರರು ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮಾಯಕೊಂಡ: ಮಾಯಕೊಂಡ ಸರ್ಕಾರಿ ಮೆಟ್ರಿಕ್‌ ಪೂರ್ವ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಸ್ವೀಪ್‌ ಕಾರ್ಯಕ್ರಮದಡಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬೇಬಿ ಸುನೀತಾ ನೇತೃತ್ವದಲ್ಲಿ ಮತದಾನ ಮಹತ್ವದ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಯಿತು. ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಹಾಗೂ ಸಂಬಂಧಿಕರಿಗೆ ಪತ್ರ ಬರೆಯಿಸಲಾಯಿತು.

ವಿದ್ಯಾರ್ಥಿ ನಿಲಯದ ವಾರ್ಡನ್‌ ಸಂತೋಷ್‌, ಸಿಬ್ಬಂದಿ ಈ ಸಂದರ್ಭದಲ್ಲಿದ್ದರು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶಿವಾನಂದ ಕುಂಬಾರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳ್ಳೂಡಿ: ಹರಿಹರ ತಾಲೂಕು ಬೆಳ್ಳೂಡಿ ಗ್ರಾಮದ ಬಾಲಕರ ವಿದ್ಯಾರ್ಥಿನಿಲಯದಲ್ಲಿ ಕಡ್ಡಾಯ ಮತದಾನದ ಜಾಗೃತಿ ಕಾರ್ಯಕ್ರಮ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್ವರಪ್ಪರ ನೇತೃತ್ವದಲ್ಲಿ ನಡೆಯಿತು.

Advertisement

ಕಡ್ಡಾಯವಾಗಿ ಮತದಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿ ವಿದ್ಯಾರ್ಥಿಗಳಿಂದ ಅವರ ಪೋಷಕರಿಗೆ ಹಾಗೂ ಸಂಬಂಧಿಕರಿಗೆ ಪತ್ರ ಬರೆಯಿಸಲಾಯಿತು. ನಿಲಯದ ವಾರ್ಡನ್‌ ಪರಶುರಾಮ್‌ ಸಾಲಕಟ್ಟೆ, ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next