Advertisement

ಅಭಿವೃದ್ಧಿಗೆ ವಿವಿಧ ಯೋಜನೆ: ಮೇಯರ್‌ 

11:27 AM Oct 20, 2017 | Team Udayavani |

ಮಹಾನಗರ: ಮುಖ್ಯ ಮಂತ್ರಿಗಳ ವಿಶೇಷ ಅನುದಾನದಲ್ಲಿ ಕೈಗೊಳ್ಳಲಾಗುವ ನಗರದ ಬಜಾಲ್‌- ಕಲ್ಲಗುಡ್ಡೆ ರಸ್ತೆಯನ್ನು 30 ಲಕ್ಷ ರೂ. ವೆಚ್ಚ ದಲ್ಲಿ ಅಭಿವೃದ್ಧಿಗೊಳಿಸುವ ಕಾಮಗಾರಿಗೆ ಮೇಯರ್‌ ಕವಿತಾ ಸನಿಲ್‌ ಗುರುವಾರ ಶಿಲಾನ್ಯಾಸ ನೆರವೇರಿಸಿದರು.

Advertisement

ಅನಂತರ ಮಾತನಾಡಿದ ಅವರು, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ನಗರದ ವಿವಿಧ ಕಡೆಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಈಗಾಗಲೇ ಮುಂದಡಿ ಇಡಲಾಗಿದೆ. ಈ ಎಲ್ಲ ಯೋಜನೆಗಳನ್ನು ಶೀಘ್ರದಲ್ಲಿ ಮುಗಿಸುವಂತೆ ಸೂಚಿಸಲಾಗಿದೆ. ಜತೆಗೆ ನಗರ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು, ಇನ್ನಷ್ಟು ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದರು.

ನಗರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಅನುದಾನಗಳನ್ನು ಜತೆಯಾಗಿಸಿ, ಜನರ ಬೇಡಿಕೆಗಳನ್ನು ಈಡೇರಿಸುವ ನೆಲೆಯಿಂದ ಒಂದೊಂದೇ ಯೋಜನೆಯನ್ನು ಜಾರಿಗೊಳಿಸಲಾಗುವುದು. ಒಂದೆರಡು ದಿನದಲ್ಲಿ ನಗರದ ಎಲ್ಲ ರಸ್ತೆಗಳನ್ನು ಸುಸ್ಥಿತಿಗೆ ತರುವ ಕೆಲಸ ನಡೆಯಲಿದೆ ಎಂದರು.

ಶಾಸಕ ಜೆ.ಆರ್‌.ಲೋಬೋ ಅಧ್ಯಕ್ಷತೆ ವಹಿಸಿದ್ದರು. ಮನಪಾ ಉಪ ಮೇಯರ್‌ ರಜನೀಶ್‌, ಮುಖ್ಯ ಸಚೇತಕ ಹಾಗೂ ಮಾಜಿ ಮೇಯರ್‌ ಎಂ.ಶಶಿಧರ ಹೆಗ್ಡೆ, ಸ್ಥಾಯೀ ಸಮಿತಿ ಅಧ್ಯಕ್ಷೆ ಸಬಿತಾ ಮಿಸ್ಕಿತ್‌, ಕಾರ್ಪೊರೇಟರ್‌ಗಳಾದ ರಾಧಾಕೃಷ್ಣ, ಸುಮಯ್ಯ ಸೇರಿದಂತೆ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next