Advertisement
ಓಂಕಾರೇಶ್ವರ ರಥೋತ್ಸವ: ಹನಗೋಡು-ಹುಣಸೂರು ರಸ್ತೆಯ ರಾಮೇನಹಳ್ಳಿಬೆಟ್ಟದ ಮೇಲಿನ ಓಂಕಾರೇಶ್ವರಸ್ವಾಮಿ ರಥೋತ್ಸವ ಮಂಗಳವಾರ ಬೆಳಗ್ಗೆ ವಿಜೃಂಭಣೆಯಿಂದ ನಡೆಯಿತು. ಸೋಮವಾರ ರಾತ್ರಿ ಬೆಟ್ಟದ ಮೇಲಿನ ದೇವಾಲಯದಲ್ಲಿ ವಿಶೇಷ ಹೋಮ, ಹವನ, ಭಜನೆ, ಭಕ್ತರಿಂದ ಜಾಗರಣೆ ನಡೆಯಿತು. ಜಾಗರಣೆ ಮಾಡಿದ್ದ ಭಕ್ತರು ಬೆಳಗ್ಗೆ ನದಿಯಲ್ಲಿ ಮಿಂದೆದ್ದು ಪೂಜೆ ಸಲ್ಲಿಸಿದರು.
Related Articles
Advertisement
ಕೊಳುವಿ ರಾಮಲಿಂಗೇಶ್ವರ ಉತ್ಸವ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕಂಟಿಕೊಂಡಿರುವ ಕೊಳುವಿಗೆಯ ಲಕ್ಷ್ಮಣ ತೀರ್ಥನದಿ ದಂಡೆಯಲ್ಲಿರುವ ರಾಮಲಿಂಗೇಶ್ವರ ದೇವಾಲಯದಲ್ಲಿ ಜಾಗರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಂಗಳವಾರ ಬೆಳಗ್ಗೆ ದೇವರ ಉತ್ಸವ ನಡೆಯಿತು. ಮಧ್ಯಹ್ನ ಅನ್ನದಾಸೋಹ ನೆರವೇರಿತು. ಸುತ್ತ ಮುತ್ತಲ ಗ್ರಾಮಗಳು ಹಾಗೂ ಹಾಡಿಗಳಿಂದ ಸಾವಿರಾರು ಮಂದಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿದ್ದರು.
ವಿವಿಧೆಡೆ ಜಾಗರಣೆ, ಪೂಜೆ: ಹುಣಸೂರು ನಗರದ ಮೈಸೂರು ರಸ್ತೆಯ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಒಂದೆಡೆ ಇರುವ ಶಿವ, ಸುಬ್ರಹ್ಮಣ್ಯ, ಕೃಷ್ಣ, ಗಣೇಶ, ಆಂಜನೇಯ, ಮಂಜುನಾಥ, ಶಿರಡಿ ಸಾಯಿಬಾಬ ಮಂದಿರಗಳಲ್ಲಿ ಭಕ್ತರ ನೂಕು ನುಗ್ಗಲು ಉಂಟಾಗಿತ್ತು. ಸುಮಾರು 25 ಸಾವಿರಕ್ಕೂ ಹೆಚ್ಚು ಮಂದಿ ಪೂಜೆ ಸಲ್ಲಿದರು.
ರುದ್ರಹೋಮ: ಲಕ್ಷ್ಮಣತೀರ್ಥ ನದಿ ದಂಡೆಯ ಮೇಲಿರುವ ಚಂದ್ರಮೌಳೇಶ್ವರ ದೇವಾಲಯದ ಆವರಣದಲ್ಲಿ ರಾತ್ರಿ ಇಡೀ ನಡೆದ ರುದ್ರಹೋಮಕ್ಕೆ ಬೆಳಗಿನ ಜಾವ ಪೂರ್ಣಾಹುತಿ ನೀಡಲಾಯಿತು. ಅಯ್ಯಪ್ಪಸ್ವಾಮಿಬೆಟ್ಟ, ಮುನೇಶ್ವರಸ್ವಾಮಿ, ಶನೇಶ್ವರ, ಕನ್ಯಕಾಪರಮೇಶ್ವರಿ ದೇವಾಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯಿತು. ಜಾಗರಣೆ ದಿನ ಶನೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಪೌರಾಣಿಕ ನಾಟಕ ಪ್ರದರ್ಶಿಸಲಾಯಿತು.
ಹನಗೋಡಿಗೆ ಸಮೀಪದ ಹೆಬ್ಟಾಳದ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ, ಅನ್ನದಾಸೋಹ, ನಗರಕ್ಕೆ ಸಮೀಪದ ಮಹದೇಶ್ವರ ದೇವಸ್ಥಾನದಲ್ಲಿ ರಾತ್ರಿ ಭಜನೆ ಹಾಗೂ ಬೆಳಗ್ಗೆ ಕೊಂಡೋತ್ಸವ, ಜಾತ್ರೆ ನಡೆಯಿತು. ಇನ್ನು ಮೈಸೂರು ರಸ್ತೆಯ ಬಿಳಿಕೆರೆಯ ಕೋಡಿ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಭಜನೆ ಆಯೋಜಿಸಲಾಗಿತ್ತು.