ಬೆಂಗಳೂರು: ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದು, ನಂತರ ತನ್ನದೇ ಪಕ್ಷ ಕಟ್ಟಿಕೊಂಡಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್ ಇದೀಗ ಬಿಜೆಪಿ ಸೇರ್ಪಡೆಗೆ ಕಸರತ್ತು ನಡೆಸುತ್ತಿದ್ದಾರೆ.
ಬಿಜೆಪಿ ಪಕ್ಷ ಸೇರ್ಪಡೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿರುವ ವರ್ತೂರು ಪ್ರಕಾಶ, ಈ ಬಗ್ಗೆ ಚರ್ಚಿಸಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಚರ್ಚಿಸಿದ್ದಾರೆ.
ಇಂದು ಸಂಜೆ 4 ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಿ ಸೇರ್ಪಡೆ ಕುರಿತು ಮಾಹಿತಿ ನೀಡುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ:ಮುಸ್ಲಿಮರ ವಿರುದ್ಧ ವಿವಾದಾತ್ಮಕ ಹೇಳಿಕೆ : ಪಿ.ಸಿ. ಜಾರ್ಜ್ ಬಂಧನ
ಪಕ್ಷೇತರ ಅಭ್ಯರ್ಥಿಯಾಗಿ ಕೋಲಾರ ಕ್ಷೇತ್ರದಿಂದ ಜಯ ಗಳಿಸಿದ್ದ ವರ್ತೂರು ಪ್ರಕಾಶ್ ಅವರು ಡಿ.ವಿ.ಸದಾನಂದ ಗೌಡ ಮತ್ತು ಜಗದೀಶ್ ಶೆಟ್ಟರ್ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿದ್ದರು. ನಂತರ ಕಾಂಗ್ರೆಸ್ ಪಕ್ಷ ಸೇರಿ ಅಲ್ಲಿಂದಲೂ ಹೊರಬಂದು 2017ರಲ್ಲಿ ನಮ್ಮ ಕಾಂಗ್ರೆಸ್ ಪಕ್ಷ ಎಂಬ ಹೊಸ ಪಕ್ಷ ಸ್ಥಾಪಿಸಿದ್ದರು.
ಸದ್ಯ ಬಿಜೆಪಿಯತ್ತ ಮುಖ ಮಾಡಿರುವ ವರ್ತೂರು ಪ್ರಕಾಶ್ 2023ರ ವಿಧಾನಸಭೆ ಚುನಾವಣೆಯ ಮೇಲೆ ಕಣ್ಣಿದ್ದಾರೆ. ಈ ಚುನಾವಣೆಯಲ್ಲಿ ಕೋಲಾರ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಪಟ್ಟಿಗೆ ವರ್ತೂರು ಪ್ರಕಾಶ್ ಸೇರ್ಪಡೆಯಾಗಿದ್ದಾರೆ.