ಹೊಸದಿಲ್ಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರ ಪಟ್ಟಿಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಗುರುವಾರ ಪ್ರಕಟಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ, ಮುರುಳಿ ಮನೋಹರ ಜೋಶಿಯವರಂಥ ಅನುಭವಿ ನಾಯಕರನ್ನು ಒಳಗೊಂಡ 80 ಜನರ ಪಟ್ಟಿಯನ್ನು ಜೆ.ಪಿ.ನಡ್ಡಾ ಪ್ರಕಟಿಸಿದರು.
ಈ ಕಾರ್ಯಕಾರಿಣಿಯಲ್ಲಿ 80 ಸಾಮಾನ್ಯ ಸದಸ್ಯರ ಜೊತೆಗೆ, 50 ವಿಶೇಷ ಆಹ್ವಾನಿತರು ಮತ್ತು 170 ಖಾಯಂ ಆಹ್ವಾನಿತರ ಸದಸ್ಯರೂ ಇರಲಿದ್ದಾರೆ. ಆದರೆ ವರುಣ್ ಗಾಂಧಿ ಮತ್ತು ಮನೇಕಾ ಗಾಂಧಿ ಅವರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.
ರಾಷ್ಟ್ರೀಯ ಕಾರ್ಯಕಾರಿಣಿಯು ಪಕ್ಷದ ಪ್ರಮುಖ ವಿಚಾರಗಳ ಜೊತೆಗೆ, ಸರ್ಕಾರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಚರ್ಚಿಸುತ್ತದೆ. ಹಾಗೆಯೇ ಪಕ್ಷದ ಸಂಘಟನೆಗೆ ಅಗತ್ಯವಾದ ಕಾರ್ಯಸೂಚಿಯನ್ನು ರೂಪಿಸುತ್ತದೆ.
ಇದನ್ನೂ ಓದಿ:ಶಾರುಖ್ ಖಾನ್ ಪಾರ್ಟಿಗಳಲ್ಲಿ ಡ್ರಗ್ಸ್ ಇರುತ್ತಿತ್ತು : ನಟಿ ಶೆರ್ಲಿನ್ ಚೋಪ್ರಾ
ಅಮಿತ್ ಶಾ, ರಾಜನಾಥ್ ಸಿಂಗ್, ಇತ್ತೀಚೆಗೆ ಸಂಪುಟಕ್ಕೆ ಸೇರ್ಪಡೆಗೊಂಡ ಸಚಿವ ಅಶ್ವಿನಿ ವೈಷ್ಣವ್ ಅವರೂ ಸೇರ್ಪಡೆಯಾಗಿದ್ದಾರೆ.
ಇತ್ತೀಚೆಗೆ ಸಂಪುಟದಿಂದ ಕೈಬಿಟ್ಟ ಮಾಜಿ ಸಚಿವರಾದ ಹರ್ಷವರ್ಧನ್, ರವಿಶಂಕರ್ ಪ್ರಸಾದ್ ಮತ್ತು ಪ್ರಕಾಶ್ ಜಾವಡೇಕರ್ ಕೂಡ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯರಾಗಿ ಉಳಿದಿದ್ದಾರೆ.