ಮುಂಬಯಿ: ಬಂಟರ ಸಂಘದ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಬಂಟ ಮಹಿಳೆಯರಿಗಾಗಿ ಜು. 29 ರಂದು ನಲಸೋಪರ ಪೂರ್ವದ ಸೈಂಟ್ ಅಲೋಶಿಯಸ್ ಸ್ಕೂಲ್ ಮೈದಾನದಲ್ಲಿ ನಡೆದ ಫುಟ್ಬಾಲ್ ಪಂದ್ಯಾಟದಲ್ಲಿ ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯು ಪ್ರಥಮ ಬಹುಮಾನ ಪಡೆಯಿತು. ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ ದ್ವಿತೀಯ ಹಾಗೂ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ ತೃತೀಯ ಬಹುಮಾನ ಮುಡಿಗೇರಿಸಿಕೊಂಡಿತು.
ಸಂಜೆ ನಡೆದ ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬಂಟರ ಸಂಘ ಮುಂಬಯಿ ಇದರ ಟ್ರಸ್ಟಿ ಕರ್ನಿರೆ ವಿಶ್ವನಾಥ ಶೆಟ್ಟಿ ಇವರು ಮಾತನಾಡಿ, ಬಂಟರ ಸಂಘವು ನಿರಂತರವಾಗಿ ಕ್ರೀಡಾಳುಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಸ್ಪರ್ಧೆಯಲ್ಲಿ ಸೋಲು-ಗೆಲುವುಗಳ ಬಗ್ಗೆ ಅವಲೋಕಿಸದೆ ನಮ್ಮ ಕ್ರೀಡಾಭಿರುಚಿಗೆ ತಕ್ಕಂತೆ ಆಡಬೇಕು. ವಿಜೇತರಾದ ಹಾಗೂ ಪಾಲ್ಗೊಂಡ ಎಲ್ಲ ಕ್ರೀಡಾಳುಗಳಿಗೆ ಅಭಿನಂದನೆಗಳು ಎಂದು ನುಡಿದು ಶುಭಹಾರೈಸಿದರು.
ವೇದಿಕೆಯಲ್ಲಿ ಬಂಟರ ಸಂಘದ ಮಾತೃಭೂಮಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಗಿರೀಶ್ ಶೆಟ್ಟಿ ತೆಳ್ಳಾರ್, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ಆರ್. ಜಿ. ಶೆಟ್ಟಿ, ಕಾರ್ಯದರ್ಶಿ ರವಿ ಶೆಟ್ಟಿ, ಭಾರತ ಫುಟ್ಬಾಲ್ ತಂಡದ ಆಟಗಾರ್ತಿ ರುಚಿ ಶೆಟ್ಟಿ, ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಜಯಂತ್ ಪಕ್ಕಳ, ಸಂಚಾಲಕ ಶಶಿಧರ್ ಕೆ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ಕರ್ನೂರು ಶಂಕರ ಆಳ್ವ, ಗೌರವ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ವಿಜಯ ಶೆಟ್ಟಿ, ಜತೆ ಕಾರ್ಯದರ್ಶಿ ರತೀಶ್ ಶೆಟ್ಟಿ, ಜತೆ ಕೋಶಾಧಿಕಾರಿ ಜಗನ್ನಾಥ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಜಯಾ ಶೆಟ್ಟಿ, ಕಾರ್ಯಕ್ರಮ ಸಮಿತಿಯ ಕಾರ್ಯಾಧ್ಯಕ್ಷೆ ಮಂಜುಳಾ ಶೆಟ್ಟಿ, ಕ್ರೀಡಾ ವಿಭಾಗದ ಕಾರ್ಯಾಧ್ಯಕ್ಷ ಅರುಣ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸುಪ್ರೀತ್ ಶೆಟ್ಟಿ ನೀರೆ, ಪದಾಧಿಕಾರಿಗಳಾದ ಹರೀಶ್ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಶ್ರದ್ಧಾ ಶೆಟ್ಟಿ, ಯಶ್ವಿನ್ ಶೆಟ್ಟಿ, ರಿತೇಶ್ ಶೆಟ್ಟಿ, ಪ್ರೀತಿ ಶೆಟ್ಟಿ, ಸಂಜನಾ ಶೆಟ್ಟಿ ಉಪಸ್ಥಿತರಿದ್ದರು.
ಪ್ರವೀಣ್ ಶೆಟ್ಟಿ ಕಣಂಜಾರು ಕಾರ್ಯಕ್ರಮ ನಿರ್ವಹಿಸಿದರು. ಸುಪ್ರೀತ್ ಶೆಟ್ಟಿ ಸ್ವಾಗತಿಸಿದರು. ಪಂದ್ಯಾಟದಲ್ಲಿ ಎಂಟು ತಂಡಗಳು ಭಾಗವಹಿಸಿದ್ದವು. ಕ್ರೀಡಾಕೂಟಕ್ಕೆ ಬಂಟರ ಸಂಘದ ಪದಾಧಿಕಾರಿಗಳು, ವಿವಿಧ ಪ್ರಾದೇಶಿಕ ಸಮಿತಿಗಳ ಪದಾಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಮಾಜ ಬಾಂಧವರು, ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.