Advertisement

Odela 2: ಓದೆಲಾ ರೈಲೆ  ಸ್ಟೇಷನ್‌-2 ಶುರು

04:50 PM Mar 06, 2024 | Team Udayavani |

ನಟ ವಸಿಷ್ಠ ಸಿಂಹ ಇದೀಗ ‘ಓದೆಲಾ ರೈಲ್ವೆ ಸ್ಟೇಷನ್‌’ ಪಾರ್ಟ್‌- 2 ಚಿತ್ರದಲ್ಲಿ ನಟಿಸುತ್ತಿದ್ದಾರೆ. ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ.

Advertisement

ಮಿಲ್ಕಿ ಬ್ಯೂಟಿ ತಮನ್ನಾ, ವಸಿಷ್ಠ ಸಿಂಹ ಫೋಟೋಗೆ ಪೋಸ್‌ ಕೊಟ್ಟಿದ್ದು, ಇದರಲ್ಲಿ ಹರಿಪ್ರಿಯ ಕೂಡ ಇದ್ದಾರೆ. ಓದೆಲಾ ರೈಲ್ವೆ ಸ್ಟೇಷನ್‌ ಮೊದಲ ಭಾಗದಲ್ಲಿ ನಟಿ ಹೆಬಾ ಪಟೇಲ್‌ ಜೊತೆ ವಸಿಷ್ಠ ಸಿಂಹ ಅಭಿನಯಿಸಿದ್ದರು. ಆದರೆ ಎರಡನೇ ಭಾಗದಲ್ಲಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಜೊತೆ ವಸಿಷ್ಠ ಸಿಂಹ ಹೆಜ್ಜೆ ಹಾಕಲಿದ್ದಾರೆ. ಹಾಗಂತ ಹೆಬಾ ಪಟೇಲ್‌ ಇಲ್ಲ ಅಂತಲ್ಲ. ಅವರು ಕೂಡ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ.

ಮಧು ಕ್ರಿಯೇಷನ್ಸ್‌ ಮತ್ತು ಸಂಪತ್‌ ನಂದಿ ಟೀಂ ವರ್ಕ್‌ ಬ್ಯಾನರ್‌ನಡಿ ಡಿ.ಮಧು ಚಿತ್ರ ನಿರ್ಮಾಣ ಮಾಡುತ್ತಿದ್ದು, ಅಶೋಕ ತೇಜ ಓದೆಲಾ ರೈಲ್ವೆ ಸ್ಟೇಷನ್‌ ಸೀಕ್ವೆಲ್‌ಗೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಸೌಂದರ್ಯ ರಾಜನ್‌ ಎಸ್‌ ಛಾಯಾಗ್ರಹಣ, ಕಾಂತಾರ ಮ್ಯೂಸಿಕ್‌ ಮಾಂತ್ರಿಕ ಅಜನೀಶ್‌ ಲೋಕನಾಥ್‌ ಸಂಗೀತ ಚಿತ್ರಕ್ಕಿದೆ.

Advertisement

Udayavani is now on Telegram. Click here to join our channel and stay updated with the latest news.

Next