Advertisement
ತೆಂಕು-ಬಡಗು ತಿಟ್ಟಿನ ಸವ್ಯಸಾಚಿ ಕಲಾವಿದರೆಂದು ಗುರುತಿಸಲ್ಪಟ್ಟ ವಾಸುದೇವ ಸಾಮಗರ ತಂದೆ ಮತ್ತು ದೊಡ್ಡಪ್ಪ ಆಗಿನ ಮಹಾನ್ ಕಲಾವಿದರು ಮತ್ತು ಹರಿದಾಸರಾದ ಕಾರಣ ಯಕ್ಷಗಾನ ಇವರನ್ನು ಕೈಬೀಸಿ ಕರೆಯಿತು.ಕೋಟ ಶ್ರೀಧರ ಹಂದೆಯವರ ಒತ್ತಾಸೆಯ ಮೇರೆಗೆ ಪ್ರಥಮ ಬಾರಿಗೆ ದೊಡ್ಡ ಕೂಟದಲ್ಲಿ ಅರ್ಥದಾರಿಯಾಗಿ ಗಮನ ಸೆಳೆದು ಅವರದ್ದೇ ಯಜಮಾನಿಕೆಯ ಅಮೃತೇಶ್ವರಿ ಮೇಳದಲ್ಲಿ ವೃತ್ತಿರಂಗಕ್ಕೆ ಕಾಲಿಟ್ಟರು. ನಾರಣಪ್ಪ ಉಪ್ಪೂರರ ಒಡನಾಟದದಲ್ಲಿ ಪರಿಪೂರ್ಣ ಕಲಾವಿದರಾಗಿ ಆ ಮೇಳದಲ್ಲಿ ಗುರುತಿಸಿಕೊಂಡರು.ಅಲ್ಲಿ ದೊಡ್ಡ ಸಾಮಗರು,ಚಿಟ್ಟಾಣಿಯವರು,ಕೋಟ ವೈಕುಂಠ,ಎಂ.ಎ.ನಾಯಕ್ ನಗರ ಜಗನ್ನಾಥ ಶೆಟ್ಟಿ,ಗೋಡೆ ನಾರಾಯಣ ಹೆಗಡೆಯವರಂತ ಘಟಾನುಘಟಿಗಳ ಸಾಂಗತ್ಯ ದೊರೆಯಿತು.ಆಗ ಪ್ರದರ್ಶನಗೊಳ್ಳುತ್ತಿದ್ದ ಯಕ್ಷಲೋಕ ವಿಜಯ ಪ್ರಸಂಗದ ಪ್ರದೀಪನ ಪಾತ್ರ ಅವರಿಗೆ ಅಪಾರ ಜನಮನ್ನಣೆ ಗಳಿಸಿಕೊಟ್ಟಿತು. ಧರ್ಮಸ್ಥಳ ಕದ್ರಿ,ಕರ್ನಾಟಕ ಸುರತ್ಕಲ್ ಮೇಳ ಬಳಿಕ ಕಾಳಿಂಗ ನಾವಡರ ಪ್ರಸಿದ್ಧಿಯ ಕಾಲದಲ್ಲಿ ಸಾಲಿಗ್ರಾಮ ಮೇಳ ಸೇರಿದ ಅವರ ಭಾನುತೇಜಸ್ವಿ ಪ್ರಸಂಗದ ಭಾನುತೇಜಸ್ವಿ ,ಚೈತ್ರಪಲ್ಲವಿಯ ಪಾತ್ರಗಳು ಪ್ರಸಿದ್ಧಿ ಪಡೆದವು.ನಾಗಶ್ರೀ ಪ್ರಸಂಗ ಶುಬ್ರಾಂಗನ ಪಾತ್ರಕ್ಕೆ ಶಿರಿಯಾರ ಮಂಜು ನಾಯ್ಕರ ನಂತರ ಹೊಸ ರೂಪವನ್ನು ನೀಡಿದ ಇವರು. ಯಕ್ಷಗಾನದಲ್ಲಿ ಪ್ರಥಮ ಬಾರಿಗೆ ಕೋರ್ಟು ಸನ್ನಿವೇಷವನ್ನು ಸೃಷ್ಟಿಸಿ ಹೊಸ ದಾಖಲೆ ಮೂಡಿಸಿದರು.ಪೆರ್ಡೂರು ಮೇಳದಲ್ಲು ಹೊಸ ಪ್ರಸಂಗಗಳಲ್ಲಿ ಸಿದ್ದಕಟ್ಟೆ ಚನ್ನಪ್ಪ ಶೆಟ್ಟಿ ಮತ್ತು ಇವರ ಜೋಡಿವೇಷಗಳು ಮಾತಿನ ಚಕಮಕಿಯಿಂದ ಹೊಸ ಹೊಸ ಪ್ರೇಕ್ಷಕರನ್ನು ಯಕ್ಷಗಾನದತ್ತ ಸೆಳೆದಿತ್ತು.ಬಳಿಕ ಬಗ್ವಾಡಿ ಸೌಕೂರು ಮುಂತಾದ ಬಯಲಾಟ ಮೇಳದಲ್ಲಿ ಬಾಗವಹಿಸಿ ಮೇಳದ ಯಜಮಾನಿಕೆಯನ್ನೂ ಮಾಡಿ ಸಿಹಿ ಕಹಿ ಉಂಡವರು.
Related Articles
Advertisement