Advertisement

ವಾಟಾಳ್‌ ರಾಜಭವನ ಮುತ್ತಿಗೆ ಯತ್ನ ವಿಫ‌ಲ

06:45 AM Apr 13, 2018 | |

ಬೆಂಗಳೂರು: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆ ಸಂಬಂಧ ತಮಿಳುನಾಡಿನ ಧೋರಣೆ ಖಂಡಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ನೇತೃತ್ವದಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಹಮ್ಮಿಕೊಂಡಿದ್ದ
ರಾಜಭವನ ಮುತ್ತಿಗೆ ಕಾರ್ಯಕ್ರಮವನ್ನು ವಿಫ‌ಲಗೊಳಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.

Advertisement

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಸೇರಿ ಇನ್ನಿತರ ಕನ್ನಡ ಪರ ಸಂಘಟನೆಗಳ ನಾಯಕರ ಜತೆಗೂಡಿ ವಾಟಾಳ್‌ ನಾಗರಾಜ್‌ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರೂ ಮಾರ್ಗ ಮಧ್ಯೆ ಅವರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ವಾಟಾಳ್‌ ನಾಗರಾಜ್‌, ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ, ಪ್ರತಿಪಕ್ಷ ಮುಖಂಡ ಸ್ಟಾಲಿನ್‌ ಸೇರಿ ಇನ್ನಿತರ ರಾಜಕೀಯ ಮುಖಂಡರು ನ್ಯಾಯಾಲಯದ ಆದೇಶಕ್ಕೂ ಮನ್ನಣೆ ನೀಡದೆ ರಾಜಕೀಯ ಉದ್ದೇಶಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ
ಎಂದರು. ಚ್‌.ಡಿ.ದೇವೇಗೌಡರನ್ನು ಹೊರತುಪಡಿಸಿ ರಾಜ್ಯದ ಯಾವುದೇ ಸಂಸದರು ಕಾವೇರಿ ವಿಚಾರದ ಬಗ್ಗೆ ಬಾಯಿ ಬಿಡುತ್ತಿಲ್ಲ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಸಂಸದರ ನಿವಾಸಗಳಿಗೆ ಬೀಗ ಹಾಕಿ ಪ್ರತಿಭಟಿಸುವುದಾಗಿ ಎಚ್ಚರಿಸಿದರು.

ಚಿತ್ರ ವಿತರಣೆ, ಹಂಚಿಕೆ ಬೇಡ: ಕನ್ನಡಿಗರನ್ನು, ಕಾವೇರಿಯನ್ನು ರಾಜಕೀಯ ವಿಚಾರಕ್ಕೆ ಬಳಸಿಕೊಳ್ಳುತ್ತಿರುವ ಚಿತ್ರ ನಟ ಕಮಲ್‌ ಹಾಸನ್‌ ಮತ್ತು ರಜನಿಕಾಂತ್‌ ವರ್ತನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಾ.ರಾ.ಗೋವಿಂದು, ಯಾವುದೇ ಕಾರಣಕ್ಕೂ ಈ ನಟರ ಚಿತ್ರಗಳನ್ನು ಕನ್ನಡಿಗರು ಹಂಚಿಕೆ ಮತ್ತು ವಿತರಣೆ ಮಾಡಬಾರದೆಂದು ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next