Advertisement

ಹೈಕ ಭಾಗಕ್ಕೆ ಡಿಸಿಎಂ ಸ್ಥಾನ ನೀಡಲು ವಾಟಾಳ್‌ ಆಗ್ರಹ

11:48 AM Jun 15, 2018 | Team Udayavani |

ಬೆಂಗಳೂರು: ಹೈದರಾಬಾದ್‌ ಕರ್ನಾಟಕ ಭಾಗದ ಮುಖಂಡರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಕನ್ನಡ ಚಳವಳಿ ವಾಟಾಳ್‌ ಪಕ್ಷದ ನಾಯಕ ವಾಟಾಳ್‌ ನಾಗರಾಜ್‌ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದರು.

Advertisement

ಹೈದರಾಬಾದ್‌ ಕರ್ನಾಟಕ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಅಲ್ಲದೆ, ಆರ್ಥಿಕವಾಗಿ ಹಿಂದುಳಿದಿರುವ ಹೈದರಾಬಾದ್‌ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳು ನೆಲೆ ನಿಲ್ಲಬೇಕಾಗಿದೆ. ಹೀಗಾಗಿ ಈ ಭಾಗಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಕೇವಲ ನಾಡೋಜ ಪ್ರಶಸ್ತಿ ಪ್ರದಾನ ಮಾಡುವುದರಲ್ಲೇ ಕಾಲ ಕಳೆಯುತ್ತಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ, ಕನ್ನಡ ಪರ ಕೆಲಸ ಮಾಡುತ್ತಿಲ್ಲ. ಕೃಷ್ಣದೇವರಾಯ ವಿವಿ ಕೂಡ ಆರ್ಥಿಕ ತೊಂದರೆ ಅನುಭವಿಸುತ್ತಿದೆ. ಈ ಬಗ್ಗೆ ನೂತನ ಸರ್ಕಾರ ಗಮನ ಹರಿಸಬೇಕು. ಈ ಎಲ್ಲ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಕಾರ್ಯಕರ್ತರು ಜೂ.21ರಂದು ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next