Advertisement

ಹಿಜ್ಬುಲ್‌ ಉಗ್ರರಿಗೆ ಶಸ್ತ್ರಾಸ್ತ್ರ ಮಾರಾಟ: ವ್ಯಕ್ತಿಯ ಬಂಧನ

09:49 AM Jan 08, 2020 | Team Udayavani |

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶಾರ್‌ ಜಿಲ್ಲೆಯಲ್ಲಿ ಹಿಜ್ಬುಲ್‌ ಮುಜಾಹಿದೀನ್‌ ಉಗ್ರರಿಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿನ ಗ್ರಾಮ ರಕ್ಷಣಾ ಸಮಿತಿ ಸದಸ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಕಳೆದ ನವೆಂಬರ್‌ನಲ್ಲಿ ಉಗ್ರ ಸಂಘಟನೆಗೆ ಸೇರ್ಪಡೆಯಾಗಿದ್ದ ತಾರಿಖ್‌ ಹುಸೈನ್‌ ಎಂಬಾತನ ವಿಚಾರಣೆ ವೇಳೆ ಆತ, ತನಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದು ಕಿಶಾ¤$Ìರ್‌ನ ದೇವಿ ದಾಸ್‌ ಎಂದು ಬಾಯಿಬಿಟ್ಟಿದ್ದಾನೆ. ಅದರ ಆಧಾರದಲ್ಲಿ ದಾಸ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಮತ್ತೂಂದು ಘಟನೆಯಲ್ಲಿ, ಪಾಕಿಸ್ತಾನದ ಯುವತಿಯ ಹನಿಟ್ರ್ಯಾಪ್‌ ಜಾಲಕ್ಕೆ ಬಿದ್ದು, ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ರವಾನಿಸಿದ ಆರೋಪದಲ್ಲಿ ಗಡಿ ಗ್ರಾಮ ಅರ್ನಿಯಾದ ರಾಕೇಶ್‌ ಕುಮಾರ್‌ ಎಂಬಾತನನ್ನು ಮಂಗಳವಾರ ಬಂಧಿಸಲಾಗಿದೆ. ಈತನ ವಿರುದ್ಧ ಬೇಹುಗಾರಿಕೆ ಆರೋಪವನ್ನೂ ಹೊರಿಸಲಾಗಿದೆ.

ಈ ನಡುವೆ, ದಕ್ಷಿಣ ಕಾಶ್ಮೀರದ ಅವಂತಿಪೋರಾದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಸ್ಥಳೀಯ ಉಗ್ರನೊಬ್ಬನನ್ನು ಹತ್ಯೆಗೈದಿದೆ.

Advertisement

Udayavani is now on Telegram. Click here to join our channel and stay updated with the latest news.

Next