ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶಕ್ಕೂ ಮುನ್ನ ರಾಜ್ಯದಲ್ಲಿ ಕೆಲವು ರಾಜಕೀಯ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಮಂಗಳವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಾ.ಜಿ.ಪರಮೇಶ್ವರ್ ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ನಿವಾಸದಲ್ಲಿ ವೇಣುಗೋಪಾಲ್ ಹಾಗೂ ಕಾಂಗ್ರೆಸ್ ನಾಯಕರು ಸಮಾಲೋಚನೆ ನಡೆಸಿದರು.
ರಾಹುಲ್ ಸೂಚನೆ ಮೇರೆಗೆ ಆಗಮಿಸಿದ ವೇಣುಗೋಪಾಲ್, ಕುಮಾರಸ್ವಾಮಿ ಜತೆ ಚರ್ಚಿಸಿದರು. ಇದೇ ಸಂದರ್ಭದಲ್ಲಿ ರೋಷನ್‌ಬೇಗ್ ಹೇಳಿಕೆ ಬಗ್ಗೆಯೂ ಪ್ರಸ್ತಾಪವಾಯಿತು ಎಂದು ಹೇಳಲಾಗಿದೆ.
ಫಲಿತಾಂಶದ ನಂತರವೂ ಸಮ್ಮಿಶ್ರ ಸರ್ಕಾರಕ್ಕೂ ತೊಂದರೆಯಾಗದಂತೆ ನೋಡಿಕೊಳ್ಳಬೇಕಿದೆ ಎಂದು ವೇಣುಗೋಪಾಲ್ ಹೇಳಿದರು. ಆದರೆ, ಇದಕ್ಕೆ ಕುಮಾರಸ್ವಾಮಿ, ಕಾಂಗ್ರೆಸ್‌ನ ಕೆಲವು ನಾಯಕರಿಂದ ಸರ್ಕಾರಕ್ಕೆ ಧಕ್ಕೆ ತರುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಎಂದು ಹೇಳ ಲಾಗಿದೆ. ಆದರೆ, ಕುಮಾರಸ್ವಾಮಿ ಅವರನ್ನು ವೇಣು ಗೋಪಾಲ್ ಸಮಾಧಾನಪಡಿಸಿ ಆ ರೀತಿ ಏನೂ ಆಗು ವುದಿಲ್ಲ ಎಂದು ಭರವಸೆ ನೀಡಿದರು ಎನ್ನಲಾಗಿದೆ.
Advertisement
ಬಿಜೆಪಿ ಮತ್ತೆ ಆಪರೇಷನ್ ಕಮಲ ಪ್ರಾರಂಭಿ ಸಲಿದೆ. ಕೆಲವು ಕಾಂಗ್ರೆಸ್‌ನ ಶಾಸಕರು ಅವರ ಸಂಪ ರ್ಕದಲ್ಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿರುವು ದರಿಂದ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಲು ಹೈಕಮಾಂಡ್ ವೇಣುಗೋಪಾಲ್ ಅವರನ್ನು ರಾಜ್ಯಕ್ಕೆ ಕಳುಹಿಸಿದೆ.