Advertisement
ನಗರದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಗಾಂಧಿ ಹತ್ಯೆಗೆ ಸಂಚು ರೂಪಿಸಿ ದವರಲ್ಲಿ ವೀರ ಸಾವರ್ಕರ್ ಓರ್ವ ಆರೋಪಿಯಾಗಿದ್ದು, ಬಳಿಕ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಂಡರು. ಅಂಥವರಿಗೆ ಭಾರತರತ್ನ ನೀಡುವುದು ಸರಿಯಲ್ಲ ಎಂದರು.
Related Articles
Advertisement
ಓಟಿಗಾಗಿ ನೀರು: ಮಹಾರಾಷ್ಟ್ರಕ್ಕೆ ನೀರು ಬಿಡುತ್ತೇವೆ ಎಂಬುದು ಚುನಾವಣೆಗೋಸ್ಕರ ಯಡಿಯೂರಪ್ಪ ನೀಡಿದ ಹೇಳಿಕೆ. ಓಟಿಗಾಗಿ ಈ ರೀತಿ ಮಾಡುತ್ತಿದ್ದಾರೆ. ಎರಡೂ ರಾಜ್ಯಗಳ ಮಧ್ಯೆ ಮಾತುಕತೆ ಆಗದೆ ಏನೂ ಮಾಡಲು ಆಗುವುದಿಲ್ಲ ಎಂದರು.
ಬಿಜೆಪಿ ನಾಯಕರಿಂದ ವ್ಯಾಪಕ ಟೀಕೆಬೆಂಗಳೂರು: ಸಾವರ್ಕರ್ ಅವರನ್ನು ನಾಥೂ ರಾಮ್ ಗೋಡ್ಸೆಗೆ ಹೋಲಿಸಿ ವಿಧಾನಸಭೆ ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿ ರುವ ಹೇಳಿಕೆಗೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಸ್ವಾತಂತ್ರ್ಯ ವೀರ ಸಾವರ್ಕರ್ ಅವರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಟೀಕೆಗಳು ಆ ಪಕ್ಷದ ಅಧ:ಪತನದ ಸಂಕೇತ. ಕಾಂಗ್ರೆಸ್ ನಾಯಕರ ಬೌದ್ಧಿಕ ದಿವಾಳಿತನಕ್ಕೆ ಇದಕ್ಕಿಂತ ಬೇರೆ ನಿರ್ದೇಶನ ಬೇಕಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಧಾನ ಪರಿ ಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ. ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಕಾರಣ ಯಾರು ಎನ್ನುವುದು ಗೊತ್ತಿದ್ದರೂ ಬಿಜೆಪಿ ಮತ್ತು ಸಂಘ ಪರಿವಾರವನ್ನು ದೂರುತ್ತಿದ್ದ ಕಾಂಗ್ರೆಸ್ ನಾಯಕರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ತನಿಖಾ ವರದಿಗಳಿದ್ದರೂ ಗಾಂಧೀಜಿ ಹತ್ಯೆಯಲ್ಲಿ ವೀರ ಸಾವರ್ಕರ್ ಅವರ ಪಾತ್ರವಿತ್ತು ಎನ್ನುವ ಮೂಲಕ ದೇಶದ ಸ್ವಾತಂತ್ರ್ಯ ಹೋರಾಟವನ್ನೇ ಕೀಳಾಗಿ ನೋಡಿರುವ ಕಾಂಗ್ರೆಸ್, ಸ್ವಾತಂತ್ರ್ಯ ಯೋಧರನ್ನು ಅವಮಾನಿ ಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಟ್ವೀಟ್: ಸಿದ್ದರಾಮಯ್ಯ ಅವರ ಹೇಳಿಕೆಗೆ ಸಚಿವ ಈಶ್ವರಪ್ಪ ಟ್ವಿಟ್ಟರ್‌ನಲ್ಲಿ ಟಾಂಗ್ ನೀಡಿದ್ದಾರೆ. “ನಾವಾಗಿದ್ದಕ್ಕೆ ಸಾವರ್ಕರ್ ಅವರಿಗೆ ಭಾರತ ರತ್ನ ನೀಡಲು ಶಿಫಾರಸು ಮಾಡುತ್ತಿದ್ದೇವೆ. ಸನ್ಮಾನ್ಯ ಸಿದ್ದರಾಮಯ್ಯನವರೇ, ನೀವಾಗಿದ್ದರೆ ಜಿನ್ನಾಗೆ ಭಾರತರತ್ನ ಕೊಡಿಸಲು ಶಿಫಾರಸ್ಸು ಮಾಡು ತ್ತಿದ್ದಿರೇನೋ? ಅಲ್ವಾ’ ಎಂದು ಈಶ್ವರಪ್ಪ ಟ್ವೀಟ್ ಮಾಡಿ ಸಿದ್ದರಾಮಯ್ಯ ಅವರ ಕಾಲೆಳೆದಿದ್ದಾರೆ. ನಳಿನ್‌ಗೆ ಆರ್ಥಿಕ ಪರಿಸ್ಥಿತಿಯ ಜ್ಞಾನವಿಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರನ್ನು ಟೀಕಿಸಿದ ಸಿದ್ದರಾಮಯ್ಯ, ಅವರಿಗೆ ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಜ್ಞಾನವಿಲ್ಲ. ರಾಜ್ಯದಲ್ಲಿ ಎಷ್ಟು ಜಿಲ್ಲೆಗಳಿವೆ ಎಂಬುದೇ ಗೊತ್ತಿಲ್ಲ. ಯಡಿಯೂರಪ್ಪ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರಿಗೆ ಒಲ್ಲದ ಕೂಸು ಆಗಿದ್ದರೆ, ನಳಿನ್, ಸಂತೋಷ್ ಅವರು ಸ್ವಿಚ್ ಬಟನ್ ಹಾಕಿದಾಗ ನೃತ್ಯ ಮಾಡುತ್ತಾರೆ. ಇದು ರಾಜ್ಯದ ಪರಿಸ್ಥಿತಿ ಎಂದು ವ್ಯಂಗ್ಯವಾಡಿದರು. ಸಾವರ್ಕರ್ ಅವರಿಗೆ ಭಾರತರತ್ನವನ್ನು ಆಮೇಲೆ ಕೊಡುವಿರಂತೆ. ಸಾಮಾಜಿಕ ಸೇವೆಗಾಗಿ ತಮ್ಮ ಬದುಕನ್ನು ತೇದು ಲಿಂಗೈಕ್ಯವಾಗಿರುವ ಸಿದ್ದಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಗಳಿಗೆ ಭಾರತರತ್ನ ನೀಡಿ. ಕನಿಷ್ಠ ಈ ಒಂದು ಭರವಸೆಯನ್ನಾದರೂ ಈಡೇರಿಸಿ.
-ಸಿದ್ದರಾಮಯ್ಯ, ಪ್ರತಿಪಕ್ಷದ ನಾಯಕ