ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮೊದಲು ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಗೆ ಪೂರಕವಾಗಿ ನಿಂತು ಲಿಂಗಾಯತ ಮತಗಳನ್ನು ಬಿಜೆಪಿಯಿಂದ ಸೆಳೆಯಲು ತಂತ್ರ ಹೆಣೆದಿದ್ದ ಕಾಂಗ್ರೆಸ್ ಈ ಬಾರಿ ಲೋಕಸಭೆ ಚುನಾವಣೆಗೆ ವೀರಶೈವ ಲಿಂಗಾಯತ ಒಂದೇ ಎನ್ನುವ ಮಂತ್ರ ಜಪಿಸುವ ಮೂಲಕ ಆ ಸಮುದಾಯದ ಮತ ಸೆಳೆಯಲು ಹೊಸ ತಂತ್ರ ರೂಪಿಸಿದೆ. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕಾಂಗ್ರೆಸ್ ಪ್ರಯತ್ನಿಸಿದ್ದರಿಂದ ತಮ್ಮಿಂದ ತಪ್ತಾಯ್ತು ಎಂದು ಉಪ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಹೇಳಿರುವುದು ಬಳ್ಳಾರಿ, ಜಮಖಂಡಿಯಲ್ಲಿ ಕಾಂಗ್ರೆಸ್‌ಗೆ ಫಲ ನೀಡಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅದನ್ನು ಹೈಕಮಾಂಡ್‌ಗೂ ತಿಳಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು, ಪ್ರತ್ಯೇಕ ಧರ್ಮದ ಬದಲು ಎರಡೂ ಒಂದೇ ಎನ್ನುವ ಮಂತ್ರದ ಮೂಲಕ ವೀರಶೈವ ಲಿಂಗಾಯತ ಮತ ಮತ್ತೆ ಕಾಂಗ್ರೆಸ್‌ನತ್ತ ತರಲು ಮುಂದಾಗಿದ್ದಾರೆ.
ಬೆಂಗಳೂರು: ವಿಧಾನಸಭೆ ಚುನಾವಣೆಗೂ ಮೊದಲು ಲಿಂಗಾಯತ ಪ್ರತ್ಯೇಕ ಧರ್ಮದ ಬೇಡಿಕೆಗೆ ಪೂರಕವಾಗಿ ನಿಂತು ಲಿಂಗಾಯತ ಮತಗಳನ್ನು ಬಿಜೆಪಿಯಿಂದ ಸೆಳೆ ಯಲು ತಂತ್ರ ಹೆಣೆದಿದ್ದ ಕಾಂಗ್ರೆಸ್ ಈ ಬಾರಿ ಲೋಕಸಭೆ ಚುನಾವಣೆಗೆ ವೀರಶೈವ ಲಿಂಗಾಯತ ಒಂದೇ ಎನ್ನುವ ಮಂತ್ರ ಜಪಿಸುವ ಮೂಲಕ ಆ ಸಮುದಾಯದ ಮತ ಸೆಳೆಯಲು ಹೊಸ ತಂತ್ರ ರೂಪಿಸಿದೆ. ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕಾಂಗ್ರೆಸ್ ಪ್ರಯತ್ನಿಸಿದ್ದರಿಂದ ತಮ್ಮಿಂದ ತಪ್ತಾಯ್ತು ಎಂದು ಉಪ ಚುನಾವಣೆ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಹೇಳಿರುವುದು ಬಳ್ಳಾರಿ, ಜಮಖಂಡಿಯಲ್ಲಿ ಕಾಂಗ್ರೆಸ್‌ಗೆ ಫಲ ನೀಡಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಅದನ್ನು ಹೈಕಮಾಂಡ್‌ಗೂ ತಿಳಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು, ಪ್ರತ್ಯೇಕ ಧರ್ಮದ ಬದಲು ಎರಡೂ ಒಂದೇ ಎನ್ನುವ ಮಂತ್ರದ ಮೂಲಕ ವೀರಶೈವ ಲಿಂಗಾಯತ ಮತ ಮತ್ತೆ ಕಾಂಗ್ರೆಸ್‌ನತ್ತ ತರಲು ಮುಂದಾಗಿದ್ದಾರೆ.
ಉಪ ಚುನಾವಣೆ ಸಂದರ್ಭದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಪ್ರಯತ್ನಿಸಿದ್ದು ತಮ್ಮಿಂದ ತಪ್ಪಾಗಿದೆ. ಇನ್ನು ಮುಂದೆ ಯಾವುದೇ ಧರ್ಮ ವಿಚಾರದಲ್ಲಿ ನಾವು ಕೈ ಹಾಕುವುದಿಲ್ಲ, ನಮ್ಮನ್ನು ಕ್ಷಮಿಸಿ ಬಿಡಿ ಎಂದು ತುಂಬಿದ ಸಭೆಯಲ್ಲಿ ಕೈ ಮುಗಿದು ಮನವಿ ಮಾಡಿದ್ದರು. ಅವರ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟಗಾರರು ಹೇಳಿಕೆ ಖಂಡಿಸಿದ್ದರು. ಆದರೆ ಡಿ.ಕೆ. ಶಿವಕುಮಾರ್ ಮಾತ್ರ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದರು. ಬಳ್ಳಾರಿ ಯಲ್ಲಿ ವೀರಶೈವ ಲಿಂಗಾಯತ ಸಮುದಾಯದವರು ರೆಡ್ಡಿ ಹಾಗೂ ರಾಮುಲು ವಿರುದ್ಧ ಇದ್ದರೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮೇಲಿನ ಅಭಿಮಾನಕ್ಕೆ ಬಿಜೆಪಿಗೆ ಮತ ಹಾಕುತ್ತ ಬಂದಿದ್ದರು.ಆದರೆ, ತಪ್ಪಾಯಿತು ಎಂಬ ಹೇಳಿಕೆ ನಂತರ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್ ತಪ್ಪು ಒಪ್ಪಿಕೊಂಡ ಸಂದೇಶ ರವಾನಿಸಲಾಯಿತು. ಹೀಗಾಗಿ, ಬಳ್ಳಾರಿಯಲ್ಲಿ ಎರಡು ಲಕ್ಷ ಮತಗಳ ಅಂತರದಿಂದ ಜಯಗಳಿಸಲು ಸಾಧ್ಯವಾಯಿತು. ಜಮಖಂಡಿಯಲ್ಲಿ 40 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಲು ಇದೇ ಮಂತ್ರ ಕಾರಣವಾಯಿತು ಎನ್ನಲಾಗಿದೆ.
ಪ್ರತ್ಯೇಕ ಧ್ವನಿ ಎತ್ತದಂತೆ ಸೂಚನೆ: ಕಳೆದ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಪರ ಬಹಿರಂಗ ವಾಗಿಯೇ ಪ್ರಚಾರ ಮಾಡಿದ್ದ ಕಾಂಗ್ರೆಸ್ ನಾಯಕರು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಪ್ರತ್ಯೇಕ ಧರ್ಮದ ಬಗ್ಗೆ ಮಾತನಾಡದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಖಡಕ್ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಅದರ ಬದಲು ವೀರಶೈವ ಲಿಂಗಾಯತ ಎರಡೂ ಒಂದೇ ಎನ್ನುವ ಮೂಲಕ ಪ್ರಬಲ ಸಮುದಾಯವನ್ನು ಬಿಜೆಪಿಯಿಂದ ತನ್ನತ್ತ ಸೆಳೆಯಲು ಕಾರ್ಯತಂತ್ರ ರೂಪಿಸಲು ಸೂಚನೆ ನೀಡಿದ್ದಾರೆ
ಎಂದು ತಿಳಿದು ಬಂದಿದೆ.
ನಾವು ಮೊದಲಿನಿಂದಲೂ ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಹೇಳಿದ್ದೇವೆ. ಪ್ರತ್ಯೇಕತೆಯ ಬೇಡಿಕೆ ಮುಗಿದು ಹೋಗಿದೆ. ಎರಡೂ ಬಣಗಳು ಒಂದೇ ಎನ್ನುವ ಭಾವನೆ ಮೂಡುತ್ತಿದೆ. ಈ ನಿಟ್ಟಿನಲ್ಲಿ ಮಾತುಕತೆ ನಡೆಸುತ್ತಿದ್ದೇವೆ. ಸಮುದಾಯದ ಭಾವನೆಯಂತೆ ನಾವು ನಡೆದುಕೊಳ್ಳುತ್ತೇವೆ.
●ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ
ರಾಜಕೀಯ ಪಕ್ಷಗಳು ಧರ್ಮದ ಹೆಸರಿನಲ್ಲಿ ಲಾಭ ತೆಗೆದುಕೊಳ್ಳಲಿ ಬಿಡಲಿ, ನಮ್ಮ ಬೇಡಿಕೆ ಕೇಂದ್ರ ಸರ್ಕಾರದ ಮುಂದಿದೆ. ಅದು ಬರುವವರೆಗೂ ತಳ ಮಟ್ಟದಲ್ಲಿ ನಾವು ಸಂಘಟನೆ ಮಾಡುತ್ತಿದ್ದೇವೆ. ವೀರಶೈವ ಮಹಾಸಭಾದವರೂ ಬಸವಣ್ಣ ನಮ್ಮ ಧರ್ಮಗುರು
ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಒಂದಾಗುವ ಬಗ್ಗೆ ನಮ್ಮದೇನೂ ಆಕ್ಷೇಪ ಇಲ್ಲ.
●ಜಿ.ಬಿ. ಪಾಟೀಲ್, ಜಾಗತಿಕ ಲಿಂಗಾಯತ ಮಹಾಸಭಾ ಪ್ರಧಾನ ಕಾರ್ಯದರ್ಶಿ
ಶಂಕರ ಪಾಗೋಜಿ