Advertisement
ಬೆಳಗ್ಗೆ ಶ್ರೀಕ್ಷೇತ್ರ ಪೂಂಜದ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಕಂಬಳದ ಕರೆಯನ್ನು ಉದ್ಘಾಟಿಸಿ, ಅನಾದಿ ಕಾಲದಿಂದ ದೇಗುಲದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಜಾನಪದ ಕ್ರೀಡೆ ಕಂಬಳ ಕೃಷಿಕರ ಆರಾಧನೆಯಾಗಿ ಧಾರ್ಮಿಕ ನಂಟು ಹೊಂದಿದೆ. ಅಹಿಂಸಾತ್ಮಕವಾಗಿ ನಡೆಯುವ ಕಂಬಳ ದೇವರ ಅನುಗ್ರಹದಿಂದ ಯಶಸ್ವಿಯಾಗಿ ಸಾಗಲಿ ಎಂದು ಶುಭ ಹಾರೈಸಿದರು.
Related Articles
Advertisement
ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗ್ರಾ.ಪಂ. ಅಧ್ಯಕ್ಷ ಪ್ರಭಾಕರ ಎಚ್. ಹುಲಿಮೇರು, ಜಿ.ಪಂ. ಸದಸ್ಯ ಎಂ. ತುಂಗಪ್ಪ ಬಂಗೇರ, ಸಮಿತಿ ಗೌರವ ಸಲಹೆಗಾರರಾದ ಬಾಬು ರಾಜೇಂದ್ರ ಶೆಟ್ಟಿ ಅಜ್ಜಾಡಿ, ಕಿರಣ್ ಕುಮಾರ್ ಮಂಜಿಲ, ಪದಾಧಿಕಾರಿಗಳಾದ ಎಚ್. ಹರೀಶ ಹಿಂಗಾಣಿ, ಸಂದೇಶ ಶೆಟ್ಟಿ ಪೊಡುಂಬ, ಪುಷ್ಪರಾಜ್ ಜೈನ್ ನಡೊÂàಡಿ, ಹರಿಪ್ರಸಾದ್ ಶೆಟ್ಟಿ ಕುರುಡಾಡಿ, ರಾಜೇಶ ಶೆಟ್ಟಿ ಕೊನೆರೊಟ್ಟು, ರಾಘವೇಂದ್ರ ಭಟ್ ಹೊಕ್ಕಾಡಿಗೋಳಿ, ಜನಾರ್ದನ ಬಂಗೇರ ತಿಮರಡ್ಕ, ನಿತ್ಯಾನಂದ ಪೂಜಾರಿ ಕೆಂತಲೆ, ಕೃಷ್ಣ ಶೆಟ್ಟಿ ಉಮನೊಟ್ಟು ಮತ್ತಿತರರು ಉಪಸ್ಥಿತರಿದ್ದರು.
ಸಮಿತಿ ಗೌರವ ಸಲಹೆಗಾರ, ವಕೀಲ ಸುರೇಶ ಶೆಟ್ಟಿ ಸ್ವಾಗತಿಸಿ, ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ. ಶ್ರೀಯಾನ್ ರಾಯಿ ವಂದಿಸಿದರು.
ಅಹಿಂಸಾತ್ಮಕ ಕಂಬಳ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಪಿ.ಆರ್ .ಶೆಟ್ಟಿ ಕೂಳೂರು ಪೊಯ್ಯೊಲು ಮಾತನಾಡಿ, ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ಜಿಲ್ಲೆಯಲ್ಲಿ ಅಹಿಂಸಾತ್ಮಕ ಕಂಬಳ ನಡೆಸಲು ಜಿಲ್ಲಾ ಸಮಿತಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶಿಸ್ತು ಮತ್ತು ನಿಯಮಾವಳಿ ಉಲ್ಲಂಘಿಸಿದ ಕೋಣಗಳನ್ನು ಮುಂದಿನ ಕಂಬಳದಲ್ಲಿ ಭಾಗವಹಿಸಲು ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.