ವಿಟ್ಲ: ಬೆಳಗ್ಗೆ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ವೀರಕಂಬ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ ಸದಸ್ಯೆ ಲಲಿತಾ ಅವರು ಸಂಜೆ ವೇಳೆಗೆ ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದಾರೆ. ಇದೀಗ ವೀರಕಂಬ ಗ್ರಾಮ ಪಂಚಾಯತ್ ನಲ್ಲಿ ಮತ್ತೆ ಅತಂತ್ರ ಸ್ಥಿತಿ ನಿರ್ಮಾಣಗೊಂಡಿದೆ.
ಲಲಿತಾ ಅವರು ಬಂಟ್ವಾಳ ಶಾಸಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು ಅವರ ಸಮ್ಮುಖದಲ್ಲಿ ರವಿವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದರು.
ಕಾಂಗ್ರೆಸ್ ಬಿಜೆಪಿ ಸಮಬಲದಲ್ಲಿದ್ದ ವೀರಕಂಬ ಪಂಚಾಯತ್ ನಲ್ಲಿ ಬಿಜೆಪಿ ಅಧಿಕಾರಕ್ಕೇರಿತು ಎಂದು ಸಂತಸಪಟ್ಟಿತ್ತು.
ಸಂಜೆ ವೇಳೆಗೆ ಲಲಿತಾ ಅವರು ಮಾಜಿ ಸಚಿವ ರಮಾನಾಥ ರೈ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತೆ ಸೇರ್ಪಡೆಗೊಂಡಿದ್ದಾರೆ.
ಇದನ್ನೂ ಓದಿ:ರಾಜ್ಯ ಪ್ರವಾಸ ಮಗಿಸಿ ದೆಹಲಿಗೆ ರಾಷ್ಟ್ರಪತಿ ಪ್ರಯಾಣ…ಸಿಎಂರಿಂದ ಆತ್ಮೀಯ ಬೀಳ್ಕೊಡುಗೆ
ವೀರಕಂಬ ಗ್ರಾಮ ಪಂಚಾಯತ್ ನಲ್ಲಿ ಕಳೆದ ಅವಧಿಯಲ್ಲಿ ಕಾಂಗ್ರೆಸ್ ಬೆಂಬಲಿತರ ಆಡಳಿತವಿತ್ತು. ಈ ಭಾರಿಯ ಚುನಾವಣೆಯಲ್ಲಿ 14 ಸ್ಥಾನಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತರು ತಲಾ 7-7 ಸ್ಥಾನ ಪಡೆದುಕೊಂಡಿದ್ದರು. ಇದರಿಂದ ಅತಂತ್ರ ಸ್ಥಿತಿ ನಿರ್ಮಾಣಗೊಂಡಿತ್ತು. ಇದೀಗ ಮತ್ತೆ ಅದೇ ಸ್ಥಿತಿ ನಿರ್ಮಾಣಗೊಂಡಿದೆ.