Advertisement
ಶುಕ್ರವಾರ ನಡೆದ ಮಹಾಸಭಾ ಸಭೆಯಲ್ಲಿ “ಬಸವ ತತ್ವ ಒಪ್ಪುವ’ ಎಂಬ ಪದಗುತ್ಛಕ್ಕೆ ಮಹಾಸಭಾ ಆಕ್ಷೇಪ ವ್ಯಕ್ತಪಡಿಸಿ, ಪ್ರತ್ಯೇಕ ಧರ್ಮದ ಮಾನ್ಯತೆ ನೀಡಲು ರಾಜ್ಯ ಸರ್ಕಾರ ತೆಗೆದುಕೊಂಡಿರುವ ತೀರ್ಮಾನಕ್ಕೆ ತಮ್ಮ ಸಮ್ಮತಿ ಇಲ್ಲ ಎಂಬ ಸಂದೇಶವನ್ನೂ ರವಾನಿಸಿದೆ.
ವೀರಶೈವ ಲಿಂಗಾಯಿತ ಎರಡೂ ಒಂದೇ ಆಗಿದ್ದು, ಸರ್ಕಾರ ಸಮಾಜ ಒಡೆಯುವ ಕೆಲಸಕ್ಕೆ ಮುಂದಾಗಿದೆ. ತಕ್ಷಣವೇ ಸಂಪುಟದ ನಿರ್ಣಯವನ್ನು ಹಿಂಪಡೆಯಬೇಕೆಂದು ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಅಂಗೀಕರಿಸಲಾಗಿದೆ.
Related Articles
Advertisement
ಕೇಂದ್ರದ ಮೇಲೆ ಒತ್ತಡ:ವೀರಶೈವ ಲಿಂಗಾಯತ ಸಮಾಜಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡುವಂತೆ ವೀರಶೈವ ಮಹಾಸಭೆ 2013ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ಮನವಿ ಇನ್ನೂ ಪರಿಶೀಲನೆ ಹಂತದಲ್ಲಿದೆ. ಹಿಂದೆ ಮಹಾಸಭೆ ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ರಾಜ್ಯ ಸರ್ಕಾರ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಣಯಿಸಲಾಗಿದೆ. 2013ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಇನ್ನೂ ಪರಿಶೀಲನೆ ಹಂತದಲ್ಲಿದೆ. ಆದರೆ, ಅದು ತಿರಸ್ಕೃತಗೊಂಡಿದೆ ಎಂದು ರಾಜಕೀಯ ಮುಖಂಡರು, ಮಠಾಧೀಶರು ಹಾಗೂ ಸಂಘಟನೆಗಳ ಮುಖಂಡರು ನೀಡುತ್ತಿರುವ ಹೇಳಿಕೆಯನ್ನು ಖಂಡಿಸಿರುವ ಮಹಾಸಭೆ, ತಿರಸ್ಕೃತಗೊಂಡ ದಾಖಲೆಗಳನ್ನು ಬಹಿರಂಗ ಪಡಿಸುವಂತೆ ಆಗ್ರಹಿಸಿತು. ರಾಜ್ಯಾಧ್ಯಕ್ಷ ಎನ್. ತಿಪ್ಪಣ್ಣ, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಮಾಜಿ ಸಚಿವೆಯರಾದ ರಾಣಿ ಸತೀಶ್, ಲೀಲಾದೇವಿ ಆರ್. ಪ್ರಸಾದ್, ಮಾಜಿ ಶಾಸಕ ವೀರಣ್ಣ ಚರಂತಿಮs…, ಮಹಾಸಭೆಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪ್ರಸಾದ್ ಸೇರಿದಂತೆ ವೀರಶೈವ ಮುಖಂಡರು ಭಾಗವಹಿಸಿದ್ದರು. ಯುಪಿಎ ಸರ್ಕಾರದ ಅವಧಿಯಲ್ಲಿ ವೀರಶೈವ ಲಿಂಗಾಯತ ಪ್ರತ್ಯೇಕ ಧರ್ಮ ಮಾನ್ಯತೆಗೆ ಕಳುಹಿಸಿದ್ದ ಮನವಿ ತಿರಸ್ಕೃತಗೊಂಡಿಲ್ಲ. ಅದನ್ನೇ ಪುರಸ್ಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಬಸವ ತತ್ವ ಪಾಲಿಸುವವರು ಎಂದು ಸಮಾಜವನ್ನು ಒಡೆಯುವ ರಾಜ್ಯ ಸರ್ಕಾರದ ತೀರ್ಮಾನಕ್ಕೆ ನಮ್ಮ ವಿರೋಧವಿದೆ. ಈ ತೀರ್ಮಾನವನ್ನು ವಾಪಸ್ ಪಡೆಯಬೇಕು.
– ಶಾಮನೂರು ಶಿವಶಂಕರಪ್ಪ, ಅಖೀಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ. ರಾಜ್ಯ ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಒಪ್ಪಲು ಸಾಧ್ಯವಿಲ್ಲ. ಬಸವ ತತ್ವವನ್ನು ಎಲ್ಲರೂ ನಂಬುತ್ತಾರೆ. ವೀರಶೈವ ಲಿಂಗಾಯತ ಎರಡೂ ಒಂದೆ. ಈಗ ಆಗಿರುವ ನಾನ್‌ಸೆನ್ಸ್‌ಗಳಿಗೆ ರಾಜ್ಯ ಸರ್ಕಾರವೇ ಹೊಣೆ. ಚುನಾವಣೆ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಒಡೆಯುವ ಪ್ರಯತ್ನ ಬೇಡ. ವೀರಶೈವ ಲಿಂಗಾಯತರು ಸರ್ಕಾರ ಭಾವಿಸಿದಷ್ಟು ಮೂರ್ಖರಲ್ಲ.
– ಎನ್. ತಿಪ್ಪಣ್ಣ, ಅಖೀಲ ಭಾರತ ವೀರಶೈವ ಮಹಾಸಭಾ ರಾಜ್ಯಾಧ್ಯಕ್ಷ.