Advertisement

ವೀರಶೈವ ಮಹಾಸಭಾ ಇಬ್ಭಾಗ,ಲಿಂಗಾಯತ ಮಹಾಸಭಾ ಉದಯ

06:00 AM Jan 24, 2018 | Harsha Rao |

ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾ ಸಭಾಗೆ ಪರ್ಯಾಯವಾಗಿ ಜಾಗತಿಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬಂದಿದೆ. ಈ ಮೂಲಕ ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿದ್ದ ವೀರಶೈವ -ಲಿಂಗಾಯತ ಸಮುದಾಯದ ಮಹಾಸಭಾ ಇಬ್ಭಾಗವಾದಂತಾಗಿದೆ.

Advertisement

ಪ್ರತ್ಯೇಕ ಲಿಂಗಾಯತ ಮಹಾಸಭಾ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವೀರಶೈವ ಮಹಾಸಭಾದ ಪ್ರಾಥಮಿಕ ಸದಸ್ಯತ್ವಕ್ಕೆ  ವಿಧಾನ ಪರಿಷತ್‌ನ ಹಿರಿಯ ಸದಸ್ಯ ಬಸವರಾಜ್‌ ಹೊರಟ್ಟಿ ಸಹಿತ ದಾವಣಗೆರೆ, ಧಾರವಾಡ, ಬೆಳಗಾವಿ ಹಾಗೂ ಮಂಡ್ಯ ಜಿಲ್ಲಾ ಘಟಕಗಳ ಅಧ್ಯಕ್ಷರು ಹಾಗೂ 400ಕ್ಕೂ ಹೆಚ್ಚು ಸದಸ್ಯರು ರಾಜೀನಾಮೆ ಸಲ್ಲಿಸಿ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿಕೊಂಡರು.

ಮಂಗಳವಾರ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಲಿಂಗಾಯತ ಮುಖಂಡರು ಮತ್ತು ಸ್ವಾಮೀಜಿಗಳ ಸಭೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ ರಚನೆಗೆ ತೀರ್ಮಾನ ಕೈಗೊಳ್ಳಲಾಯಿತು.ಪ್ರತ್ಯೇಕ ಲಿಂಗಾಯತ ಧರ್ಮದ ಮಾನ್ಯತೆಗಾಗಿ ಹೋರಾಡುತ್ತಿರುವ ಹಿರಿಯ ಮುಖಂಡ ಬಸವರಾಜ್‌ ಹೊರಟ್ಟಿ  ಜಾಗತಿಕ ಲಿಂಗಾಯತ ಮಹಾಸಭೆಯ ಮೊದಲ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡರೆ, ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಕಾರ್ಯಾಧ್ಯಕ್ಷರಾಗಿ ಮತ್ತು  ವೈದ್ಯ ಕೀಯ ಶಿಕ್ಷಣ ಸಚಿವ ಡಾ| ಶರಣ ಪ್ರಕಾಶ್‌ ಪಾಟೀಲ್‌ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು.

ಇಷ್ಟು ದಿನ ಉತ್ತರ ಕರ್ನಾಟಕ ಭಾಗದಲ್ಲಿ ಮಾತ್ರ ಹೋರಾಟ ಪ್ರಬಲವಾಗಿ ನಡೆಯುತ್ತಿತ್ತು. ಮುಂದಿನ ದಿನ ಗಳಲ್ಲಿ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಸಮಾವೇಶಗಳನ್ನು ನಡೆಸಲು ತೀರ್ಮಾನಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next