Advertisement

ವೀರಶೈವ ಮಹಾಸಭೆ ಚುನಾವಣೆ ಇಂದು 

12:30 AM Mar 03, 2019 | Team Udayavani |

ಬೆಂಗಳೂರು: ಅಖೀಲ ಭಾರತ ವೀರಶೈವ ಮಹಾಸಭೆಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕಡೆಗೂ ಚುನಾವಣೆ ನಡೆಯುವಂತಾಗಿದೆ. ಹಾಲಿ ರಾಜ್ಯಾಧ್ಯಕ್ಷ ಎನ್‌. ತಿಪ್ಪಣ್ಣ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕೆನ್ನುವ ಶಾಮನೂರು ಶಿವಶಂಕರಪ್ಪ ಅವರ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ನಿವೃತ್ತ ಪೊಲೀಸ್‌ ಮಹಾ ನಿರ್ದೇಶಕ ಶಂಕರ್‌ ಬಿದರಿ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆಗೆ ಪ್ರಯತ್ನ ನಡೆಸಿದ್ದರು. ಅವರನ್ನು ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮನವೊಲಿಸಿ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಎನ್‌. ತಿಪ್ಪಣ್ಣ ವಿರುದಟಛಿ ಮೈಸೂರಿನ ಕೆ.ಎನ್‌.ಪುಟ್ಟಬುದ್ದಿ ಎನ್ನುವವರು ಸ್ಪರ್ಧೆ ಮಾಡುತ್ತಿದ್ದಾರೆ. ಹೀಗಾಗಿ ಈ ಬಾರಿಯ ಮಹಾಸಭೆ ಚುನಾವಣೆ ಮಹತ್ವ ಪಡೆದುಕೊಂಡಿದೆ.

Advertisement

ಮಾಹಿತಿ ನೀಡದ ಆರೋಪ: ಮಾ. 3ರಂದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು ಈ ಬಗ್ಗೆ ಮಹಾಸಭೆಯ ಸದಸ್ಯರಿಗೆ ಯಾವುದೇ ಮಾಹಿತಿ ನೀಡಿಲ್ಲ ಎಂಬ ಆರೋಪ ಕೇಳಿ ಬಂದಿದೆ. ಮಹಾಸಭೆಯ ಈ ನಡೆ ವಿರೋಧಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲೇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ನಾನು  ಮಹಾಸಭೆಯ ಸದಸ್ಯನಾಗಿದ್ದರೂ, ಚುನಾವಣೆ ನಡೆಯುವ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಈ ನಡೆಯನ್ನು ಪ್ರಶ್ನಿಸಿ ನ್ಯಾಯಾಲಯದ ಮೊರೆ ಹೋಗುವುದಾಗಿ ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಮೇಯರ್‌ ಅಮೃತ್‌ ಪಾಟೀಲ್‌ ಹೇಳಿದ್ದಾರೆ.

ಚುನಾವಣೆಯ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಚುನಾವಣೆ ರದ್ದುಗೊಳಿಸುವಂತೆ ಶಾಮನೂರು ಶಿವಶಂಕರಪ್ಪಅವರಿಗೆ ಮನವಿ ಸಲ್ಲಿಸಲು ನಿರ್ಧರಿಸಿರುವುದಾಗಿ ಎಂ.ಎಸ್‌. ನರಿಬೋಳ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next