Advertisement

ವೀರಶೈವ ಮಹಾಸಭಾ ನಡೆ ಅರ್ಥಹೀನ: ಮಾತೆ ಮಹಾದೇವಿ

06:35 AM Mar 25, 2018 | |

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ಸಂಬಂಧ ಸರ್ಕಾರದ ನಿರ್ಧಾರವನ್ನು ವಿರೋಧಿಸುತ್ತಿರುವ ವೀರಶೈವ ಮಹಾಸಭಾದ ನಡೆ ಅರ್ಥಹೀನ ಎಂದು ರಾಷ್ಟ್ರೀಯ ಬಸವದಳ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಆರೋಪಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 900 ವರ್ಷಗಳ ಹಿಂದೆ ಸ್ಥಾಪಿಸಿದ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕತೆಯ ಮಾನ್ಯತೆ ನೀಡಿರುವ ಸಿದ್ದರಾಮಯ್ಯ ಅವರ ನಿರ್ಧಾರವನ್ನು ಅಭಿನಂದಿಸಬೇಕೇ ಹೊರತು ವಿರೋಧಿಸಬಾರದು ಎಂದು ಹೇಳಿದರು.

ವೀರಶೈವ ಮಹಾಸಭೆ ರಾಜ್ಯಾಧ್ಯಕ್ಷ ಎನ್‌.ತಿಪ್ಪಣ್ಣನವರು “ವೀರಶೈವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕುವುದಿಲ್ಲ’ ಎಂದು ಹೇಳಿದ್ದಾರೆ. ಮತ ಹಾಕುವುದು ಅವರವರ ವೈಯಕ್ತಿಕ ವಿಚಾರ. ಈ ರೀತಿ ಯಾರಿಗೂ ನಿರ್ಬಂಧ ಹೇರಬಾರದು. ಸರ್ಕಾರದ ಈ ದಿಟ್ಟ ನಿರ್ಧಾರದಿಂದ ಲಿಂಗಾಯತರು ಸಂತುಷ್ಟಗೊಂಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಕೈಹಿಡಿಯಲಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next