Advertisement

ಡಾ|ವೀರೇಂದ್ರ ಹೆಗ್ಗಡೆ ಅವರ ಜನ್ಮದಿನ: ಗಣ್ಯರಿಂದ ಶುಭಾಶಯ

08:51 PM Nov 25, 2020 | mahesh |

ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ ಅವರ 73ನೇ ಹುಟ್ಟುಹಬ್ಬವನ್ನು ಈ ಬಾರಿ ಸರಳ ರೀತಿಯಲ್ಲಿ ಆಚರಿಸಲಾಗಿದ್ದು, ಬುಧವಾರ ಹಲವು ಗಣ್ಯರು ಕ್ಷೇತ್ರಕ್ಕೆ ಭೇಟಿ ನೀಡಿ ಧರ್ಮಾಧಿಕಾರಿಗಳಿಗೆ ಫಲಪುಷ್ಪವನ್ನು ಅರ್ಪಿಸಿ ಶುಭಾಶಯ ಕೋರಿದರು.

Advertisement

ಡಾ| ಡಿ.ವೀರೇಂದ್ರ ಹೆಗ್ಗಡೆ ಅವರು ಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿ ಹಾಗೂ ಭಗವಾನ್‌ ಶ್ರೀ ಚಂದ್ರನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಹೆಗ್ಗಡೆಯವರ ಕುಟುಂಬದ ಸದಸ್ಯರು ಪಾಲ್ಗೊಂಡಿದ್ದರು. ಹಲವು ಗಣ್ಯರು ದೂರವಾಣಿ ಕರೆ ಹಾಗೂ ಸಂದೇಶಗಳ ಮೂಲಕ ಶುಭಾಶಯ ತಿಳಿಸಿದರು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ, ವಿಧಾನ ಪರಿಷತ್‌ ಸದಸ್ಯರಾದ ಕೆ.ಹರೀಶ್‌ಕುಮಾರ್‌, ಪ್ರತಾಪಸಿಂಹ ನಾಯಕ್‌, ಬರೋಡದ ಉದ್ಯಮಿ ಶಶಿಧರ್‌ ಶೆಟ್ಟಿ, ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಅಪ್ಪಣ್ಣ ಹೆಗ್ಡೆ ಬೈಂದೂರು, ದ.ಕ.ಕೃಷಿಕ ಸಮಾಜದ ಅಧ್ಯಕ್ಷ ಎಸ್‌.ಡಿ.ಸಾಮ್ರಾಜ್ಯ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌.ಮಂಜುನಾಥ್‌, ಸಿರಿ ಗ್ರಾಮೋದ್ಯೋಗ ಸಂಸ್ಥೆ ಎಂಡಿ ಕೆ.ಎನ್‌.ಜನಾರ್ದನ್‌, ಉಜಿರೆ ರುಡ್‌ಸೆಟ್‌ ಕಾರ್ಯನಿರ್ವಹಣಾಧಿಕಾರಿ ಜನಾರ್ದನ್‌, ಜನಜಾಗೃತಿ ವೇದಿಕೆ ರಾಜ್ಯಾಧ್ಯಕ್ಷ ವಿ.ರಾಮಸ್ವಾಮಿ, ಸ್ಥಾಪಕಾಧ್ಯಕ್ಷ ವಸಂತ ಸಾಲ್ಯಾನ್‌, ದ.ಕ.ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ ನಾಯಕ್‌ ಇಂದಾಜೆ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಪ್ರಾಧ್ಯಾಪಕರು, ಸಿಬಂದಿ, ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರು, ಯೋಜನಾಧಿಕಾರಿಗಳು, ಸಿಬಂದಿ, ದೇಗುಲದ ಸಿಬಂದಿ, ನಾಡಿನ ಗಣ್ಯರು, ಅಭಿಮಾನಿಗಳು, ಊರವರು ಶುಭ ಹಾರೈಸಿದರು.

ಸಹಾಯಹಸ್ತ ವಿತರಣೆ
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ವಾತ್ಸಲ್ಯ ಸಹಾಯಹಸ್ತ ವಿತರಣೆಗೆ ಧರ್ಮಾಧಿಕಾರಿಗಳು ಚಾಲನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next