Advertisement

ವೀರೇಂದ್ರ ಹೆಗ್ಗಡೆ, ಇಳಯರಾಜ,ವಿಜಯೇಂದ್ರ ಪ್ರಸಾದ್‌, ಪಿಟಿ ಉಷಾ, ರಾಜ್ಯಸಭೆಗೆ ನಾಮನಿರ್ದೇಶನ

10:17 PM Jul 06, 2022 | Team Udayavani |

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ , ಕೇರಳದ ಮಾಜಿ ಅಥ್ಲೀಟ್‌ ಪಿಟಿ ಉಷಾ , ಆಂಧ್ರಪ್ರದೇಶದ ವಿ.ವಿಜಯೇಂದ್ರ ಪ್ರಸಾದ್‌ , ತಮಿಳುನಾಡಿನ ಇಳಯರಾಜ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ.

Advertisement

ಶ್ರೀ ವೀರೇಂದ್ರ ಹೆಗ್ಗಡೆಯವರು ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿದ್ದಾರೆ. ಧರ್ಮಸ್ಥಳದ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ವೀಕ್ಷಿಸಲು ನನಗೆ ಅವಕಾಶ ದೊರಕಿತ್ತು. ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಉತ್ಕೃಷ್ಟಗೊಳಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.

ಸೃಜನಶೀಲ ಪ್ರತಿಭೆ ಇಳಯರಾಜ ಅವರು ತಲೆಮಾರುಗಳಿಂದ ಜನರನ್ನು ಆಕರ್ಷಿಸಿದ್ದಾರೆ. ಅವರ ಕೃತಿಗಳು ಅನೇಕ ಭಾವನೆಗಳನ್ನು ಸುಂದರವಾಗಿ ಪ್ರತಿಬಿಂಬಿಸುತ್ತವೆ. ಅವರ ಜೀವನ ಪಯಣವೂ ಅಷ್ಟೇ ಸ್ಪೂರ್ತಿದಾಯಕವಾಗಿದೆ- ಅವರು ವಿನಮ್ರ ಹಿನ್ನೆಲೆಯಿಂದ ಬೆಳೆದು ತುಂಬಾ ಸಾಧಿಸಿದ್ದಾರೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವುದು ಸಂತಸ ತಂದಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

ಗಮನಾರ್ಹವಾದ ಪಿಟಿ ಉಷಾ ಅವರು ಪ್ರತಿಯೊಬ್ಬ ಭಾರತೀಯನಿಗೂ ಸ್ಫೂರ್ತಿಯಾಗಿದ್ದಾರೆ. ಕ್ರೀಡೆಯಲ್ಲಿ ಅವರ ಸಾಧನೆಗಳು ವ್ಯಾಪಕವಾಗಿ ತಿಳಿದಿವೆ ಆದರೆ ಕಳೆದ ಹಲವಾರು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಅಷ್ಟೇ ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿರುವ ಆಕೆಗೆ ಅಭಿನಂದನೆಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.

Advertisement

ವಿ.ವಿಜಯೇಂದ್ರ ಪ್ರಸಾದ್ ಅವರು ದಶಕಗಳಿಂದ ಸೃಜನಶೀಲ ಪ್ರಪಂಚದೊಂದಿಗೆ ಸಂಬಂಧ ಹೊಂದಿದ್ದು, ಅವರ ಕೃತಿಗಳು ಭಾರತದ ವೈಭವಯುತ ಸಂಸ್ಕೃತಿಯನ್ನು ಪ್ರದರ್ಶಿಸುತ್ತವೆ ಮತ್ತು ಜಾಗತಿಕವಾಗಿ ಗುರುತಿಸಲ್ಪಟ್ಟಿವೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಅವರಿಗೆ ಅಭಿನಂದನೆಗಳು ಎಂದು ಪ್ರಧಾನಿ ಸರಣಿ ಟ್ವೀಟ್ ಗಳಲ್ಲಿ ನಾಲ್ವರನ್ನು ಅಭಿನಂದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next