Advertisement
ಜಿಲ್ಲೆಯಲ್ಲಿ ಒಂದರಿಂದ ಹತ್ತನೇ ತರಗತಿವರೆಗೆ ಬಿಸಿಯೂಟ ನೀಡಲಾಗುತ್ತಿದೆ ಸರ್ಕಾರ 4.97ರೂ ಖರ್ಚು ಮಾಡುತ್ತಿದೆ. ಟೊಮೆಟೋ ಬೆಲೆ ಗಗನಕೇರಿ ಏರಿದ್ದರಿಂದ ಊಟದಲ್ಲಿ ಟೊಮೆಟೋ ಬದಲು ಹುಣಸೆಹಣ್ಣು ಬಳಸಲಾಗುತ್ತಿದೆ. ಶಾಲೆಗಳಿಗೆ ಬಿಸಿ ಊಟದ ತರಕಾರಿ ಅಡುಗೆ ಅನಿಲ ಸೇರಿ ಬಿಸಿಯೂಟ ನೌಕರರು ಹಾಗೂ ಶಿಕ್ಷಕರು ಕೈಯಿಂದ ಹಣ ಹಾಕಿ ಖರೀದಿಸಿ ತರುತ್ತಿದ್ದಾರೆ. ಅಕ್ಷರ ದಾಸೋಹ ಯೋಜನೆ ಅಡಿ ಸರ್ಕಾರ ದಿನವಾದ ಊಟದ ಮೆನು ರೂಪಿಸಿದೆ. ಈ ಮೆನು ವಿನಲ್ಲಿ ಆಯ ತರಕಾರಿ ಬಳಕೆ ಮೊದಲಾದ ತಾವುಗಳ ಪಟ್ಟಿಯಲ್ಲಿ ಟೊಮೆಟೋ ಇದ್ದೆ ಇದೆ. ಟೊಮೆಟೋ ಇಲ್ಲದೆ ಅಕ್ಷರ ದಾಸೋಹ ಯೋಜನೆಯ ಊಟದ ಮೆನು ಅಪೂರ್ಣ. ಆದರೆ ಸರ್ಕಾರ ಒದಗಿಸಿದ ಅನುದಾನದಲ್ಲಿ ಟೊಮೆಟೋ ಹೊಂದಿಸುವುದು ಮುಖ್ಯ ಶಿಕ್ಷಕರಿಗೆ ತಲೆ ನೋವಾಗಿದೆ.
Related Articles
Advertisement
ತಮ್ಮ ಜೇಬಿನಿಂದ ಹಣ ವೆಚ್ಚ ತರಕಾರಿ ಖರೀದಿ: ತರಕಾರಿ ಬೆಲೆಯು ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನದಲ್ಲಿ ತರಕಾರಿ ಖರೀದಿ ಸಲು ಸಾಧ್ಯವಾಗದೆ ತಮ್ಮ ಜೇಬಿನಿಂದ ಹಣ ವೆಚ್ಚ ಮಾಡಿ ಶಿಕ್ಷಕರು ತರಕಾರಿ ಖರೀದಿಸುತ್ತಿದ್ದಾರೆ. ಸರ್ಕಾರ, ಅಕ್ಷರ ದಾಸೋಹ ಇಲಾಖೆಯ ಮೂಲಕ ಬಿಸಿಯೂಟಕ್ಕಾಗಿ ಅಕ್ಕಿ, ಬೇಳೆ, ಅಡುಗೆ ಅನಿಲ, ಗೋಧಿ, ಎಣ್ಣೆ, ಸರಬ ರಾಜು ಮಾಡುತ್ತಿದೆ. ಇನ್ನು ಉಳಿದಂತೆ ಸಾಂಬಾರು ಪದಾರ್ಥಗಳು, ಉಪ್ಪು, ತರಕಾರಿ ಶಾಲೆ ಯವರೇ ಖರೀದಿಸಬೇಕಾಗಿದೆ. ಈಗಿನ ಬೆಲೆಗಳಲ್ಲಿ ಒಬ್ಬ ವಿದ್ಯಾರ್ಥಿಗೆ ಸರಾಸರಿ 4 ಖರ್ಚಾಗುತ್ತಿದ್ದು, ಹೆಚ್ಚುವರಿ 1.20 ಶಿಕ್ಷಕರಿಗೆ ಹೊರೆಯಾಗುತ್ತಿದೆ ಎಂಬುದು ಶಾಲಾಭಿವೃದ್ಧಿ ಸಮಿತಿಯ ಸದಸ್ಯರ ಮಾತಾಗಿದೆ.
ಅಗತ್ಯ ವಸ್ತುಗಳ ಬೆಲೆ ಏರಿಕೆ: ಅನುದಾನ ಹೆಚ್ಚಳ ಅಗತ್ಯ : ಸರ್ಕಾರ ಮಕ್ಕಳಿಗೆ ಬಿಸಿಯೂಟ ಕೊಡುತ್ತಿದೆ. ಆದರೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಸರ್ಕಾರ ನೀಡುವ ಅನುದಾನ ಏರಿಕೆಯಾಗದೆ ಶಿಕ್ಷಕರು ಯಾವ ರೀತಿ ನಿಬಾಯಿಸುತ್ತಾರೆ. ಅವರ ಜೇಬಿಂದ ಎಷ್ಟು ದಿನ ಖರ್ಚು ಮಾಡಲು ಸಾಧ್ಯ. ಹಾಗಾಗಿ ಅನುದಾನ ಹೆಚ್ಚಳ ಮಾಡಬೇಕೆಂಬುದು ಪೋಷಕಿ ರಾಧಾ ಅವರ ಮಾತಾಗಿದೆ.
ತರಕಾರಿಗಳ ಬೆಲೆ ಏರಿಕೆಯಾ ಗಿರುವುದರಿಂದ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ತರಕಾರಿ ಒದ ಗಿಸಲಾಗುತ್ತಿಲ್ಲ. ಇರುವುದರಲ್ಲೇ ಸರಿದೂಗಿಸಿಕೊಂಡು ಹೋಗು ತ್ತಿದ್ದೇವೆ ಎಂದು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಲಿಂಗಪ್ಪ ತಿಳಿಸಿದರು.
ಪ್ರಸ್ತುತ ಸರ್ಕಾರದಿಂದ ನಮಗೆ ಬಿಡುಗಡೆಯಾಗುವ ಅನುದಾನವನ್ನು ಆಯಾ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಹಾಗೂ ಮುಖ್ಯ ಶಿಕ್ಷಕರ ಜಂಟಿ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಬಿಸಿಯೂಟಕ್ಕೆ ನೀಡುವ ದರವೂ ಹೊಸದಾಗಿ ಪರಿಷ್ಕರಣೆಯಾಗಿದೆ. ಈ ವರ್ಷದಲ್ಲಿ ದಾಖಲಾಗಿರುವ ವಿದ್ಯಾರ್ಥಿಗಳ ಸಂಪೂರ್ಣ ಅಂಕಿ ಅಂಶಗಳ ಚಿತ್ರಣ ದೊರೆತರೆ ಉತ್ತಮ ಪರಿಹಾರ ಕಂಡುಕೊಳ್ಳಲು ಸಾಧ್ಯ. ● ಸುಧಾ, ಸಹಾಯಕ ನಿರ್ದೇಶಕಿ ಅಕ್ಷರ ದಾಸೋಹ ದೇವನಹಳ್ಳಿ