Advertisement

ಉತ್ತರಾಖಂಡ : ತಾನಕ್ ಪುರ್ – ಚಂಪಾವತ್ ಹೆದ್ದಾರಿಯಲ್ಲಿ ಭಾರಿ ಗುಡ್ಡ ಕುಸಿತ : ಸಂಚಾರ ಸ್ಥಗಿತ

12:05 PM Aug 24, 2021 | Team Udayavani |

ತಾನಕ್ ಪುರ್ : ಉತ್ತರಾಖಂಡದಲ್ಲಿ ಮತ್ತೊಂದು ಭಾರಿ ಪ್ರಮಾಣದ ಗುಡ್ಡ ಕುಸಿತ ಉಂಟಾಗಿದ್ದು, ತಾನಕ್ ಪುರ ಹಾಗೂ ಚಂಪಾವತ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

Advertisement

ಚಂಪಾವತ್ ಸಮೀಪದ ಸ್ವಾಲಾ ಬಳಿ ಗುಡ್ಡ ಕುಸಿತ, ಭಾರಿ ಗಾತ್ರದ ಬಂಡೆಗಳು ಉರುಳಿ ಬಿದ್ದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ : ಸಮಯಕೋಸ್ಕರ ನಾವು ಕಾಯಬೇಕೆ ಹೊರತು ಸಮಯ ನಮಗಾಗಿ ಕಾಯುವುದಿಲ್ಲ…

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ವೀಡಿಯೋಗಳಲ್ಲಿ ಭಾರಿ ಗಾತ್ರದ ಮರಗಳು ಧರಾಶಾಯಿಯಾಗುತ್ತಿರುವುದು, ದೊಡ್ಡ ದೊಡ್ಡ ಬಂಡೆಗಳು ಉರುಳಿ ಬೀಳುತ್ತಿರುವುದು ಭಯಾನಕವಾಗಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅಲ್ಲಿನ ಜಿಲ್ಲಾಧಿಕಾರಿ ವಿನೀತ್ ತಾಮೋರ್, ಗುಡ್ಡ ಕುಸಿತದಿಂದ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದೆ. ಹೆದ್ದಾರಿಯ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸಂಚಾರಕ್ಕೆ ಮುಕ್ತವಾಗುವುದಕ್ಕೆ ಇನ್ನೂ ಎರಡು ದಿನಗಳ ಕಾಲ ತೆಗೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

Advertisement

ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದರು ದಾರಿ ಮಧ್ಯದಲ್ಲಿ ಸಿಲುಕಿದ್ದಾರೆ. ಗುಡ್ಡ ಕುಸಿತದ ಪರಿಣಾಮದಿಂದಾಗಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಆದರೇ, ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ರಸ್ತೆ ತೆರವು ಕಾರ್ಯಾಚರಣೆಯನ್ನು ಶೀಘ್ರದಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಮುಗಿಸುವಂತೆ ಆದೇಶಿಸಲಾಗಿದೆ ಎಂದಿದ್ದಾರೆ.

ಇನ್ನು, ಕೆಲವು ವಾರಗಳ ಹಿಂದೆ, ಹಿಮಾಚಲ ಪ್ರದೇಶದ ಕಿನ್ನೌರ್‌ ನಲ್ಲಿ ಸಂಭವಿಸಿದ ಭಾರೀ ಗುಡ್ಡ ಕುಸಿತದ ಕಾರಣದಿಂದಾಗಿ ಸುಮಾರು 28 ಮಂದಿ ಮೃತ ಪಟ್ಟಿದ್ದರು.

ಇದನ್ನೂ ಓದಿ : ನಾಲ್ಕು ವರ್ಷಗಳಿಂದ ಚಿಂಪಾಂಜಿ ಜತೆ ಮಹಿಳೆಯ ಲವ್‌ ಅಫೇರ್‌!

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next