Advertisement

“ಬೀದಿ ಬದಿ ವ್ಯಾಪಾರಿಗಳಿಗೆ ವೆಂಡರ್‌ ಝೋನ್‌’

07:55 AM Sep 10, 2017 | Team Udayavani |

ಉಡುಪಿ: ಬೀದಿ ಬದಿ ವ್ಯಾಪಾರಿಗಳು ಸಾರ್ವಜನಿಕರು ಸಂಚರಿಸುವ ರಸ್ತೆಗಳನ್ನು ಆಕ್ರಮಿಸಿ ವ್ಯಾಪಾರ ನಡೆಸುವುದನ್ನು ತಪ್ಪಿಸಲು ಪ್ರತ್ಯೇಕ ವೆಂಡರ್‌ ಝೋನ್‌ಗಳನ್ನು ಗುರುತಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಅನುರಾಧ ಜಿ. ತಿಳಿಸಿದರು.

Advertisement

ಅವರು ಶುಕ್ರವಾರ ರಜತಾದ್ರಿಯ ಅಟಲ್‌ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ರಾಜ್ಯ ನಗರಾಭಿವೃವೃದ್ಧಿ ಸಂಸ್ಥೆ ಮೈಸೂರು, ಜಿಲ್ಲಾ ನಗರಾಭಿವೃದ್ಧಿ ಕೋಶ, ನಗರ ಸ್ಥಳೀಯ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ದೀನ್‌ ದಯಾಳ್‌ ಅಂತ್ಯೋದಯ ಯೋಜನೆ ರಾಷ್ಟ್ರೀಯ ನಗರ ಜೀವನೋಪಾಯಗಳ ಅಭಿಯಾನ ಕಾರ್ಯಕ್ರಮದಡಿ ಬೀದಿ ಬದಿ ವ್ಯಾಪಾರಿಗಳ ಸಂರಕ್ಷಣೆ, ಜೀವನೋಪಾಯ ಹಾಗೂ ನಿಯಂತ್ರಣ ಅಧಿನಿಯಮ -2014 ರ ಕುರಿತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಮೂಲ ಸೌಕರ್ಯ
ಉಡುಪಿ ನಗರದಲ್ಲಿ 289 ಮಂದಿ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸಿ ಗುರುತಿನ ಚೀಟಿ ನೀಡಲಾಗಿದೆ. ಇವರಿಗೆ ಮಣಿಪಾಲ, ಕಲ್ಸಂಕ, ಅಜ್ಜರಕಾಡು ಅಂಬಾಗಿಲುವಿನಲ್ಲಿ ವೆಂಡರ್‌ ಝೊàನ್‌ ಗುರುತಿಸಲಾಗಿದೆ. ಈ ವ್ಯಾಪಾರಿಗಳಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಸ್ಥಳೀಯ ಸಂಸ್ಥೆಗಳು ಒದಗಿಸಲಿವೆ ಎಂದರು.

ಸಾಲಕ್ಕೆ ಕ್ರಮ ಕೈಗೊಳ್ಳಿ
ಬೀದಿ ಬದಿ ವ್ಯಾಪಾರಿಗಳಿಗೆ ಅಭದ್ರತೆ ಇದೆ. ಇವರಿಗೆ ಅಗತ್ಯವಿರುವ ಕೌಶಲಾಭಿವೃದ್ಧಿ ನೀಡುವ ಹಾಗೂ ಸಣ್ಣ ಪ್ರಮಾಣದಲ್ಲಿ ಬ್ಯಾಂಕ್‌ಗಳ ಮೂಲಕ ಸಾಲ ನೀಡಲು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ವ್ಯಾಪಾರ ನಡೆಸುವಂತಾಗಬೇಕು ಎಂದರು.

ನಗರಸಭೆಯ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಕಕ್ಕುಂಜೆ, ಕುಂದಾಪುರ ಪುರಸಭೆ ಅಧ್ಯಕ್ಷೆ ವಸಂತಿ ಸಾರಂಗ್‌, ಕಾಪು ಪುರಸಭೆ ಅಧ್ಯಕ್ಷೆ ಸೌಮ್ಯಾ, ಸಾಲಿಗ್ರಾಮ ಪ.ಪಂ. ಅಧ್ಯಕ್ಷೆ ರತ್ನಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅರುಣಾ ಪ್ರಭ, ಜಿಲ್ಲಾ ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಫ್ರಾನ್ಸಿಸ್‌ ಬೋರ್ಗಿಯಾ, ಸಂಪನ್ಮೂಲ ವ್ಯಕ್ತಿಗಳಾದ ಮಂಜುನಾಥ್‌, ಜಿ. ವಿಶ್ವನಾಥ್‌ ಉಪಸ್ಥಿತರಿದ್ದರು.

Advertisement

ಉಡುಪಿ ನಗರಸಭೆ ಪೌರಾಯುಕ್ತ ಮಂಜುನಾಥಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಸ್ವಾಗತಿಸಿ, ಕಾಪು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ವಂದಿಸಿದರು. 

Advertisement

Udayavani is now on Telegram. Click here to join our channel and stay updated with the latest news.

Next