Advertisement

ಒಂದುವರೆ ವರ್ಷಕ್ಕೆ ತಾಯೀನ ಕಳಕೊಂಡೆ, ಬಿಜೆಪಿಯೇ ನನ್ನ ತಾಯಿ 

02:00 PM Jul 18, 2017 | Team Udayavani |

ಹೊಸದಿಲ್ಲಿ : ಎನ್‌ಡಿಎ ಬೆಂಬಲಿತ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಬಿಜೆಪಿ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. 

Advertisement

ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವೆಂಕಯ್ಯ ನಾಯ್ಡು ಬಿಜೆಪಿಯ ಚಟುವಟಿಕೆಯಿಂದ ದೂರವಾಗಬೇಕಾದ ಸಂದರ್ಭ ನನೆದು ಭಾವುಕರಾದರು. ನಾನು ಒಂದುವರೆ ವರ್ಷದವನಿದ್ದಾಗ ತಾಯಿಯನ್ನು ಕಳೆದುಕೊಂಡೆ, ಭಾರತೀಯ ಜನತಾ ಪಕ್ಷವೆ ನನ್ನನ್ನು ತಾಯಿಯಂತೆ ನೋಡಿಕೊಂಡು ಈ ಹಂತಕ್ಕೆ ತಲುಪುವಂತೆ ಮಾಡಿದೆ ಎಂದರು. 

2019 ರಲ್ಲಿ ನರೇಂದ್ರ ಮೋದಿ ಅವರನ್ನು ಮತ್ತೆ ಅಧಿಕಾರಕ್ಕೇರಿಸಿ ರಾಜಕೀಯ ನಿವೃತ್ತಿ ಪಡೆಯಬೇಕೆಂಬ ಆಶಯ ನನ್ನದಾಗಿತ್ತು, ಆದರೆ ವಿಧಿ ಬೇರೆಯದ್ದೇ ಆಗಿದೆ.ಮತ್ತೆ ಮೋದಿ ಅಧಿಕಾರಕ್ಕೆ ಬರುವ ಪೂರ್ಣ ವಿಶ್ವಾಸವಿದೆ ಎಂದರು. 

ಭಾರತದ ಶಕ್ತಿ ಮತ್ತು ಸೌಂದರ್ಯ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಡಗಿದೆ. ಅದನ್ನು ಇನ್ನಷ್ಟು ಬಲಪಡಿಸಲು ನಾನು ಕೆಲಸ ಮಾಡುತ್ತೇನೆ. ನಾನು 40 ವರ್ಷಗಳ ರಾಜಕೀಯ ಜೀವನವನ್ನು ನೋಡಿದ್ದೇನೆ ಆದರೆ ಉಪರಾಷ್ಟ್ರಪತಿ ಕರ್ತವ್ಯ ನಿರ್ವಹಿಸುವುದು ಬೇರೆಯ ರೀತಿ ಹುದ್ದೆಯಾಗಿದೆ. ಆ ಸ್ಥಾನಕ್ಕೆ ನ್ಯಾಯ ಒದಗಿಸುತ್ತೇನೆ ಎಂದರು. 

Advertisement

ಸೋಮವಾರ ವೆಂಕಯ್ಯ ನಾಯ್ಡು ಅವರನ್ನು ಬಿಜೆಪಿ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿತ್ತು. ಆ ತಕ್ಷಣ  ನಾಯ್ಡು ಅವರು ಸಚಿವ ಸ್ಥಾನಕ್ಕೆ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. 

ನಾಮಪತ್ರ ಸಲ್ಲಿಕೆ ವೇಳೆ ಪ್ರಧಾನಿ ನರೇಂದ್ರ ಮೋದಿ , ಹಿರಿಯ ನಾಯಕರಾದ ಎಲ್‌.ಕೆ.ಅಡ್ವಾಣಿ, ಮುರಳಿ ಮನೋಹರ್‌ ಜೋಷಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಸಚಿವೆ ಸುಷ್ಮಾ ಸ್ವರಾಜ್‌ ಮತ್ತಿತರ ಎನ್‌ಡಿಎ ನಾಯಕರು ಉಪಸ್ಥಿತರಿದ್ದರು. 

Advertisement

Udayavani is now on Telegram. Click here to join our channel and stay updated with the latest news.

Next