ಅಬುಧಾಬಿ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಭಾನುವಾರ ಅರಬ್ ಸಂಯುಕ್ತ ಸಂಸ್ಥಾನಕ್ಕೆ(ಯುಎಇ) ತೆರಳಿದ್ದಾರೆ.
ಶುಕ್ರವಾರ ನಿಧನರಾದ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರಿಗೆ ಭಾರತೀಯ ಸರ್ಕಾರದ ಪರವಾಗಿ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅವರು ಯುಎಇ ಪ್ರಯಾಣ ಬೆಳೆಸಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಯವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಮದುವೆ ನಿಶ್ಚಯದ ಬಳಿಕ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಿಯಕರ; ಮನನೊಂದು ಪ್ರಿಯತಮೆ ಆತ್ಮಹತ್ಯೆ
ಶೇಖ್ ಖಲೀಫಾ ಅವರಿಗೆ ಸಂತಾಪ ಸೂಚಿಸುವ ನಿಟ್ಟಿನಲ್ಲಿ ಭಾರತದ ವಿದೇಶಾಂಗ ಸಚಿವರಾಗಿರುವ ಎಸ್.ಜೈಶಂಕರ್ ಅವರು ಶನಿವಾರ ನವದೆಹಲಿಯಲ್ಲಿರುವ ಯುಎಇ ರಾಯಭಾರ ಕಚೇರಿಗೆ ಭೇಟಿ ಕೊಟ್ಟಿದ್ದರು.