Advertisement

NDA ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ವೆಂಕಯ್ಯ ನಾಯ್ಡು ಕಣಕ್ಕೆ

07:54 PM Jul 17, 2017 | Karthik A |

ನವದೆಹಲಿ: ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗಾಗಿ ಕೇಂದ್ರದಲ್ಲಿ ಆಡಳಿತಾರೂಢ ಭಾರತೀಯ ಜನತಾಪಕ್ಷ ನೇತೃತ್ವದ ಎನ್‌.ಡಿ.ಎ. ಮೈತ್ರಿಕೂಟವು ಹಾಲಿ ಕೇಂದ್ರ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಅವರನ್ನು ಕಣಕ್ಕಿಳಿಸಿದೆ. ಪ್ರಸ್ತುತ ನಾಯ್ಡು ಅವರು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದಲ್ಲಿ ನಗರಾಭಿವೃದ್ಧಿ, ವಸತಿ ಮತ್ತು ನಗರ ಬಡತನ ನಿರ್ಮೂಲನ ಹಾಗೂ ಮಾಹಿತಿ ಮತ್ತು ಪ್ರಸಾರ ಸಜಿವರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಂಸದೀಯ ಕಲಾಪ ವಿಚಾರಗಳಲ್ಲಿ ಉತ್ತಮ ಜ್ಞಾನವನ್ನು ಹೊಂದಿರುವ ವೆಂಕಯ್ಯ ನಾಯ್ಡು ಅವರು ಪ್ರತಿಪಕ್ಷಗಳೊಂದಿಗೆ ಆರೋಗ್ಯಕರ ಸಂಬಂಧವನ್ನು ಹೊಂದಿರುವ ರಾಜಕಾರಣಿಯಾಗಿ ದಿಲ್ಲಿ ಪಡಸಾಲೆಯಲ್ಲಿ ಗುರುತಿಸಿಕೊಂಡಿದ್ದಾರೆ.

Advertisement

ಸೋಮವಾರ ಸಾಯಂಕಾಲ ಬಿ.ಜೆ.ಪಿ.ಯ ಸಂಸದೀಯ ಮಂಡಳಿಯ ಸಭೆ ಮುಕ್ತಾಯಗೊಂಡ ಬಳಿಕ ವೆಂಕಯ್ಯ ನಾಯ್ಡು ಅವರ ಅಭ್ಯರ್ಥಿತನವನ್ನು ಬಹಿರಂಗಪಡಿಸಲಾಯಿತು. ಈ ವಿಷಯವನ್ನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್‌ ಶಾ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದರು. ‘ನಮ್ಮ ಹಿರಿಯ ನಾಯಕ ಹಾಗೂ ಅನುಭವಿ ಮುತ್ಸದ್ದಿ ವೆಂಕಯ್ಯ ನಾಯ್ಡು ಅವರನ್ನು ಎನ್‌.ಡಿ.ಎ. ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ..’ ಎಂದು ಶಾ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ನಾಯ್ಡು ಅವರ ಅಭ್ಯರ್ಥಿತನವನ್ನು ಎನ್‌.ಡಿ.ಎ. ಮಿತ್ರಪಕ್ಷಗಳು ಬೆಂಬಲಿಸಿವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ನಾಮಪತ್ರ ಸಲ್ಲಿಸಲು ಜುಲೈ 18 ಅಂತಿಮ ದಿನಾಂಕವಾಗಿದೆ. ಆಗಸ್ಟ್‌ 05ರಂದು ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಹಾಲಿ ಉಪರಾಷ್ಟ್ರಪತಿ ಹಮೀದ್‌ ಅನ್ಸಾರಿ ಅವರ ಅಧಿಕಾರ ಅವಧಿ ಆಗಸ್ಟ್‌ 10ಕ್ಕೆ ಕೊನೆಗೊಳ್ಳಲಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next