Advertisement

ಎ. 29: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಮಂಗಳೂರಿಗೆ

08:35 AM Apr 26, 2018 | Karthik A |

ಮಂಗಳೂರು: ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಎ. 29ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಬೆಳಗ್ಗೆ 9.40ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ಹೆಲಿಕಾಪ್ಟರ್‌ನಲ್ಲಿ ಕಾಸರಗೋಡಿಗೆ ತೆರಳುವರು. ಮಧ್ಯಾಹ್ನ 1 ಗಂಟೆಗೆ ಹಿಂದಿರುಗುವ ಅವರು ರಾತ್ರಿ ನಗರದಲ್ಲಿ ವಾಸ್ತವ್ಯ ಹೂಡುವರು. ಎ. 30ರಂದು ಮಧ್ಯಾಹ್ನ 12.20ಕ್ಕೆ ವಿಶೇಷ ವಿಮಾನದಲ್ಲಿ ಕೊಚ್ಚಿಗೆ ತೆರಳಲಿದ್ದಾರೆ. ಉಪರಾಷ್ಟ್ರಪತಿಗಳ ಪ್ರವಾಸ ನಿಮಿತ್ತ ಬುಧವಾರ ದ.ಕ. ಜಿಲ್ಲಾಧಿಕಾರಿ ಡಾ| ಶಶಿಕಾಂತ್‌ ಸೆಂಥಿಲ್‌ ಅಧ್ಯಕ್ಷತೆಯಲ್ಲಿ ಉನ್ನತ ಅಧಿಕಾರಿಗಳ ಪೂರ್ವಭಾವಿ ಸಭೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next