Advertisement

ಉಪರಾಷ್ಟ್ರಪತಿಯಾಗಿ ವೆಂಕಯ್ಯ ನಾಯ್ಡು ಪ್ರಮಾಣ ವಚನ ಸ್ವೀಕಾರ

10:27 AM Aug 11, 2017 | Team Udayavani |

ಹೊಸದಿಲ್ಲಿ : ಹಿರಿಯ ಬಿಜೆಪಿ ನಾಯಕ ವೆಂಕಯ್ಯ ನಾಯ್ಡು ಅವರಿಂದು ದೇಶದ ಹದಿಮೂರನೇ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ವೆಂಕಯ್ಯ ನಾಯ್ಡು ಅವರಿಗೆ ಉಪ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಬೋಧಿಸಿದರು. 

Advertisement

68ರ ಹರೆಯದ ವೆಂಕಯ್ಯ ನಾಯ್ದು ಅವರು ಉಪ ರಾಷ್ಟ್ರಪತಿ ಚುನಾವಣೆಯಲ್ಲಿ ತಮ್ಮ ಎದುರಾಳಿಯಾಗಿದ್ದ ವಿರೋಧ ಪಕ್ಷಗಳ ಅಭ್ಯರ್ಥಿ ಗೋಪಾಲ ಕೃಷ್ಣ ಗಾಂಧಿ ಅವರೆದುರು ನಿರಾಯಾಸದ ಗೆಲುವು ಸಾಧಿಸಿದ್ದರು. 

ಪ್ರಮಾಣ ವಚನ ಸ್ವೀಕಾರಕ್ಕೆ ಮುನ್ನ ವೆಂಕಯ್ಯ ನಾಯ್ಡು ಅವರು ರಾಜಘಾಟ್‌ಗೆ ತೆರಳಿ ಮಹಾತ್ಮಾ ಗಾಂಧೀಜಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಬಳಿಕ ರಾಷ್ಟ್ರಪತಿ ಭವನದಲ್ಲಿನ ಸರ್ದಾರ್‌ ಪಟೇಲ್‌ ಪ್ರತಿಮೆಗೆ ಹಾರಾರ್ಪಣೆ ಮಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next