Advertisement

ರಾಷ್ಟ್ರಭಾಷೆ ಎಂದು ಹೆಮ್ಮೆ ಪಡಿ:ಮೆಟ್ರೋ ಹಿಂದಿಗೆ ವೆಂಕಯ್ಯ ಸಮರ್ಥನೆ

11:47 AM Jun 24, 2017 | |

ಬೆಂಗಳೂರು : ನಮ್ಮ ಮೆಟ್ರೋ ನಿಲ್ದಾಣ ಹಾಗೂ ರೈಲುಗಳಲ್ಲಿ ಹಿಂದಿ ಬಳಕೆಯನ್ನು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಸಮರ್ಥಿಸಿಕೊಂಡಿದ್ದು, ಹಿಂದಿ ರಾಷ್ಟ್ರ ಭಾಷೆ ಹೀಗಾಗಿ ಹೆಮ್ಮೆ ಪಡಬೇಕು ಎಂದು ಕನ್ನಡ ಪರ ಸಂಘಟನೆಗಳಿಗೆ ತಿರುಗೇಟು ನೀಡಿದ್ದಾರೆ. 

Advertisement

ನಮ್ಮ ಮೆಟ್ರೋದ ಸೂಚನಾ ಫ‌ಲಕಗಳಲ್ಲಿ, ನಿಲ್ದಾಣಗಳಲ್ಲಿ ಹಿಂದಿ ಭಾಷೆ ಬಳಕೆ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು.  

ಗ್ರಾಹಕರಿಗೆ ಮಾಹಿತಿ ನೀಡುವ ನೆಪದಲ್ಲಿ ಅನವಶ್ಯಕವಾಗಿ ಹಿಂದಿ ಬಳಕೆಮಾಡಲಾಗುತ್ತಿದೆ. ಹಿಂದಿ ಒಂದು ರಾಜ್ಯ ಭಾಷೆ ಹೊರತು, ರಾಷ್ಟ್ರಭಾಷೆ ಅಲ್ಲ.ಹೀಗಿರುವಾಗ, ಅನ್ಯರಾಜ್ಯದ ಭಾಷೆಯನ್ನು “ನಮ್ಮ ಮೆಟ್ರೋ’ದಲ್ಲಿ ಬಳಸುವುದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

ಹಿಂದಿ ಬಳಸುವ ಮೂಲಕ ಹಂತ ಹಂತವಾಗಿ ಪ್ರಾದೇಶಿಕ ಭಾಷೆಯನ್ನು ನಾಶ ಮಾಡುವ ಪ್ರಯತ್ನ ನಡೆದಿದೆ. ಇದನ್ನು ತಕ್ಷಣ ನಿಲ್ಲಿಸದಿದ್ದರೆ ತೀವ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. 

Advertisement

Udayavani is now on Telegram. Click here to join our channel and stay updated with the latest news.

Next