Advertisement

Venoor: ಮಚ್ಚು ತೋರಿಸಿ ಬೆದರಿಕೆ, ದೂರು ದಾಖಲು

11:15 PM Oct 11, 2023 | Team Udayavani |

ಬೆಳ್ತಂಗಡಿ: ವೇಣೂರು ಶ್ರೀ ಬಾಹುಬಲಿ ಕ್ಷೇತ್ರದ ಪರಿಸರದಲ್ಲಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಜಿನ ಭಜನ ಸ್ಪರ್ಧೆಗೆ ತರಬೇತಿ ಪಡೆಯುತ್ತಿದ್ದಾಗ ವ್ಯಕ್ತಿಯೋರ್ವ ಸ್ಥಳಕ್ಕೆ ತೆರಳಿ ಅವಾಚ್ಯ ಶಬ್ದಗಳಿಂದ ಬೈದಿರುವುದಲ್ಲದೆ, ಮಚ್ಚು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಮುಂಡೂರಿನ ಆನಂದ ಆಚಾರ್ಯ (38) ಎಂಬಾತ ಜಿನ ಭಜನ ಸ್ಪರ್ಧೆಗೆ ಮಹಿಳೆಯರು, ಮಕ್ಕಳು ಸೇರಿ ಅಭ್ಯಾಸ ನಡೆಸುತ್ತಿದ್ದ ಸ್ಥಳಕ್ಕೆ ತೆರಳಿ ಮಚ್ಚು ತೋರಿಸಿ, ಬೆದರಿಕೆ ಹಾಕಿದ್ದು ಕೂಡಲೇ ಸ್ಥಳಿಯರು ವೇಣೂರು ಠಾಣೆಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಪೋಲೀಸರು ಆಗಮಿಸಿ ಮಚ್ಚನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next