ಬೆಂಗಳೂರು: ಹೆಚ್ಚುತ್ತಿರುವ ಆಕ್ಸಿಜನ್ ಬೇಡಿಕೆ ತಗ್ಗಿಸಲು ಎಚ್‌ಎಫ್ಎನ್‌ಒ ಬದಲು ಪರ್ಯಾಯವಾಗಿ ವೆಂಟಿಲೇಟರ್ ಅಳವಡಿಸಲಾಗುವುದು ಎಂದು ಆರೋಗ್ಯಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಎಲ್ಲ ಜಿಲ್ಲೆಗಳ ಆರೋಗ್ಯಾಧಿಕಾರಿಗಳೊಂದಿಗೆ ವಿಡಿಯೊಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು.
ಮಧ್ಯಮಪ್ರಮಾಣದ ಲಕ್ಷಣ ಇರುವ ಕೋವಿಡ್ ಸೋಂಕಿತರಿಗೆನಿಮಿಷಕ್ಕೆ 20-60 ಲೀಟರ್ ಆಮ್ಲಜನಕ ಬೇಕಾಗುತ್ತದೆ.ಆಮ್ಲಜನಕದ ಸಮಸ್ಯೆ ಇರುವುದರಿಂದ ಬೇರೆ ಕ್ರಮವಹಿಸಬೇಕಿದೆ. ಇದಕ್ಕಾಗಿ ಎಚ್‌ಎಫ್ಎನ್‌ಒಗಿಂತ ಹೆಚ್ಚು ಪರಿಣಾಮಕಾರಿಯಾಗಿ ಎನ್‌ಐವಿ (ವೆಂಟಿಲೇಟರ್)ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಇದರಿಂದಾಗಿಶೇ.80 ರಷ್ಟು ಆಕ್ಸಿಜನ್ ಬೇಡಿಕೆ ಕಡಿಮೆಯಾಗುತ್ತದೆ. ಎಚ್‌ಎಫ್ಎನ್‌ಒ ಇರುವಲ್ಲಿ ಎನ್‌ಐವಿ ವೆಂಟಿಲೇಟರ್‌ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.ಕಳೆದ ಏಳೆಂಟು ತಿಂಗಳ ಪ್ರಯತ್ನದಿಂದಾಗಿ ಪ್ರತಿತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ ವ್ಯವಸ್ಥೆಮಾಡಲಾಗಿದೆ.
ಹಾಗೆಯೇ 6 ವೆಂಟಿಲೇಟರ್‌ಅಳವಡಿಸಬೇಕೆಂದು ಕ್ರಮ ವಹಿಸಲಾಗಿದೆ. ಆದರೆ ಕೆಲಆಸ್ಪತ್ರೆಯಲ್ಲಿ ತಜ್ಞರು ಇಲ್ಲದೆ, ವೆಂಟಿಲೇಟರ್ ಇದ್ದರೂಆಕ್ಸಿಜನ್ ಮಾತ್ರ ಬಳಸಲಾಗುತ್ತಿದೆ. ಈ ಸಮಸ್ಯೆಪರಿಹರಿಸಲು ಅರಿವಳಿಕೆ ತಜ್ಞರು, ವೈದ್ಯರನ್ನುತಾತ್ಕಾಲಿಕವಾಗಿ ನಿಯೋಜಿಸಲು ಸೂಚಿಸಲಾಗಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲುಈಗಾಗಲೇ ಆದೇಶಿಸಲಾಗಿದೆ. ಒಂದು ವಾರದಲ್ಲಿ ಎಲ್ಲಕಡೆ ಅಳವಡಿಸಲು ಸೂಚನೆ ನೀಡಲಾಗಿದೆ. ಸಿಸಿಟಿವಿಅಳವಡಿಕೆಯಿಂದ ಬೆಡ್‌ಗಳ ಸಮರ್ಪಕ ಬಳಕೆ ಬಗ್ಗೆ ಕೂಡನಿಗಾ ಇಡಬಹುದು ಎಂದರು