Advertisement

“ಕೈ’ನಾಯಕರ ಜತೆ ಇಂದು ವೇಣು ಸಭೆ

06:57 AM Jun 26, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯ ಸೋಲಿನ ಪರಾಮರ್ಶೆ ಹಾಗೂ ಪಕ್ಷದ ಮುಂದಿನ ಕಾರ್ಯ ಚಟುವಟಿಕೆಗಳ ಬಗ್ಗೆ ಚರ್ಚಿಸಲು ಬುಧವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರು ಪಕ್ಷದ ನಾಯಕರ ಸಭೆ ನಡೆಸಲಿದ್ದಾರೆ.

Advertisement

ಬುಧವಾರ ಬೆಳಗ್ಗೆ 11ಗಂಟೆಗೆ ಪಕ್ಷದ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು ಹಾಗೂ ಹಾಲಿ ಸಂಸದರ ಜತೆ ಸಭೆ ನಡೆಸಲಿದ್ದು, ಆಯಾ ಕ್ಷೇತ್ರಗಳಲ್ಲಿ ಪಕ್ಷದ ಸೋಲಿಗೆ ಕಾರಣ ಹಾಗೂ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಲಿದ್ದಾರೆ.

ಮಧ್ಯಾಹ್ನ ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಲಿದ್ದು. ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಸಮನ್ವಯ ಸಮಿತಿ, ಪ್ರಚಾರ ಸಮಿತಿ, ಚುನಾವಣಾ ಸಮಿತಿ ಅಧ್ಯಕ್ಷರುಗಳು ಪಾಲ್ಗೊಳ್ಳಲಿದ್ದಾರೆ. ಲೋಕಸಭೆ ಚುನಾವಣೆ ಫ‌ಲಿತಾಂಶದ ನಂತರ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಹಾಕಿಕೊಳ್ಳಬೇಕಾದ ಕಾರ್ಯಕ್ರಮಗಳ ಕುರಿತು ಸಭೆಯಲ್ಲಿ ಚರ್ಚಿಸುವ ಸಾಧ್ಯತೆ ಇದೆ.

Advertisement

Udayavani is now on Telegram. Click here to join our channel and stay updated with the latest news.

Next