ಮುಂಬೈ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್- ಗಾವಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯವನ್ನು ಧರ್ಮಶಾಲಾದಿಂದ ಸ್ಥಳಾಂತರಿಸಲು ಬಿಸಿಸಿಐ ನಿರ್ಧರಿಸಿದೆ. ಮಾರ್ಚ್ 1ರಂದು ಆರಂಭವಾಗಲಿರುವ ಮೂರನೇ ಟೆಸ್ಟ್ ಪಂದ್ಯವು ಇದೀಗ ಧರ್ಮಶಾಲಾದ ಬದಲು ಇಂಧೋರ್ ನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆಯಲಿದೆ.
ಈ ಪ್ರದೇಶದಲ್ಲಿನ ಕಠಿಣ ಚಳಿಗಾಲದ ಪರಿಸ್ಥಿತಿಗಳಿಂದಾಗಿ, ಮೈದಾನ ಸಾಕಷ್ಟು ಹುಲ್ಲಿನ ಸಾಂದ್ರತೆಯನ್ನು ಹೊಂದಿಲ್ಲ ಮತ್ತು ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ಕಲರವ; ಏರೋ ಶೋಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ಸರಣಿಯ ಮೊದಲ ಪಂದ್ಯವು ನಾಗ್ಪುರದಲ್ಲಿ ನಡೆದಿದ್ದು, ಫೆ.17ರಿಂದ ಎರಡನೇ ಟೆಸ್ಟ್ ಪಂದ್ಯ ದಿಲ್ಲಿಯಲ್ಲಿ ನಡೆಯಲಿದೆ. ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1ರಿಂದ ಇಂಧೋರ್ ನಲ್ಲಿ ಮತ್ತು ಕೊನೆಯ ಟೆಸ್ಟ್ ಪಂದ್ಯವು ಮಾರ್ಚ್ 9ರಿಂದ ಅಹಮದಾಬಾದ್ ನಲ್ಲಿ ನಡೆಯಲಿದೆ.