Advertisement

Karnataka; ಮೂರು ಡಿಸಿಎಂ ಹುದ್ದೆ ಪ್ರಸ್ತಾಪಕ್ಕೆ ವೇಣುಗೋಪಾಲ್‌ ಗರಂ

09:58 PM Jan 09, 2024 | Team Udayavani |

ಬೆಂಗಳೂರು: ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ವಿಚಾರ ಪದೇಪದೆ ಪ್ರಸ್ತಾಪಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌, ಈ ಸಂಬಂಧ ಕೆಲವು ಸಚಿವರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಸಚಿವರಾದ ಡಾ.ಜಿ. ಪರಮೇಶ್ವರ, ದಿನೇಶ್‌ ಗುಂಡೂರಾವ್‌, ಕೆ.ಎಚ್‌.ಮುನಿಯಪ್ಪ, ಕೆ.ಎನ್‌. ರಾಜಣ್ಣ ಅವರಿಗೆ ದೂರವಾಣಿ ಮೂಲಕ ವೇಣುಗೋಪಾಲ್‌ ಈ ವಿಚಾರವನ್ನು ಪದೇ ಪದೆ ಪ್ರಸ್ತಾಪಿಸಬಾರದು ಎಂದು ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ.

ಸಚಿವ ಸತೀಶ್‌ ಜಾರಕಿಹೊಳಿ ಜತೆಗೂ ಮಾತನಾಡಿ ಸಂಯಮದಿಂದ ಇರುವಂತೆ ಸಲಹೆ ನೀಡಿದ್ದಾರೆನ್ನಲಾಗಿದೆ.

“ಚುನಾವಣೆ ಹೊಸ್ತಿಲಲ್ಲಿದೆ. ಇಂತಹ ಸಂದರ್ಭದಲ್ಲಿ ಆಗಾಗ್ಗೆ ಡಿಸಿಎಂ ಹುದ್ದೆ ಬಗ್ಗೆ ಪ್ರಸ್ತಾಪ ಮಾಡುವ ಮೂಲಕ ಗೊಂದಲ ಸೃಷ್ಟಿಸುವುದು ಸರಿ ಅಲ್ಲ. ಸರ್ಕಾರ ಯಶಸ್ವಿಯಾಗಿ ನಡೆಯುತ್ತಿದೆ. ಐದೂ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಅವುಗಳನ್ನು ಮುಂದಿಟ್ಟುಕೊಂಡು ಕಾರ್ಯಕರ್ತರ ನೆರವಿನಿಂದ ಜನರ ಮನವೊಲಿಸಬೇಕು. ಅದುಬಿಟ್ಟು ಹೀಗೆ ಅನಗತ್ಯ ಗೊಂದಲ ಸಲ್ಲದು’ ಎಂದು ಸೂಚನೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next