Advertisement
ಪಕ್ಷದಲ್ಲಿ ಯಾವುದೇ ಕಾರಣಕ್ಕೂ ಶಿಸ್ತು ಉಲ್ಲಂಘನೆ ಸಹಿಸುವುದಿಲ್ಲ. ಪಕ್ಷದಲ್ಲಿದ್ದುಕೊಂಡೇ ಭಿನ್ನಮತ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Related Articles
Advertisement
ನಮ್ಮ ಶಾಸಕರಿಗೆ ವಾಟ್ಸಪ್ ಕಾಲ ಮಾಡಿ ಕೋಟಿ ಕೋಟಿ ರೂ. ನೀಡುವ ಆಮಿಷವೊಡ್ಡಿದ್ದಾರೆ. ಅಷ್ಟೊಂದು ಹಣ ಅವರಿಗೆ ಎಲ್ಲಿಂದ ಬರುತ್ತದೆ. ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.ಸಂಪುಟ ವಿಸ್ತರಣೆ ಶೀಘ್ರವೇ ಆಗಲಿದೆ. ಅ.10 ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಯಾವುದೇ ಕಾರಣಕ್ಕೂ ಮುಂದೆ ಹೋಗಲ್ಲ. ಇದು ಕಡೆಯದಾಗಿ ಹೇಳುತ್ತಿದ್ದೇನೆ ಎಂದು ಹೇಳಿದರು.
ಎಂ.ಟಿ.ಬಿ.ನಾಗರಾಜ್ ಹಾಗೂ ಸುಧಾಕರ್ ಚೆನ್ನೈಗೆ ಹೋಗಿದ್ದ ವಿಚಾರ ಕುರಿತು ಪ್ರಸ್ತಾಪಿಸಿದಾಗ, ಚೆನ್ನೈ ಸುಂದರ ನಗರ, ಅಲ್ಲಿ ಯಾಕೆ ಹೋಗಬಾರದು ಎಂದು ಪ್ರಶ್ನಿಸಿ, ಕಾಂಗ್ರೆಸ್ ಶಾಸಕರ ಬಗ್ಗೆ ನಮಗೆ ಸಂಪೂರ್ಣ ವಿಶ್ವಾಸವಿದೆ ಎಂದು ತಿಳಿಸಿದರು.
ಬಗ್ಗಲ್ಲಕೆಪಿಸಿಸಿ ಅಧ್ಯಕ್ಷ ದಿನೇಶ್‌ಗುಂಡೂರಾವ್ ಮಾತನಾಡಿ, ಕಾಂಗ್ರೆಸ್ ಪಕ್ಷ ಯಾರ ಬ್ಲಾಕ್‌ಮೇಲ್ ಹಾಗೂ ಹೆದರಿಕೆಗಳಿಗೆ ಬಗ್ಗಲ್ಲ. ಪಕ್ಷದ ಶಿಸ್ತು ಉಲ್ಲಂ ಸಿದರೆ ಗಂಭೀರ ಕ್ರಮ ಎದುರಿಸಬೇಕಾಗುತ್ತದೆ. ಈಕುರಿತು ನಾನೂ ಕೆಲವೊಂದು ಮಾಹಿತಿ ಪಡೆಯುತ್ತಿದ್ದೇನೆ ಎಂದು ತಿಳಿಸಿದರು. ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವ ಗುರಿ ನಮ್ಮದು. ಮುಂದಿನ ದಿನಗಳಲ್ಲಿ ಇದೇ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಲಿದ್ದೇವೆ.
– ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ಸಿದ್ದರಾಮಯ್ಯ, ನಾನು ಇರೋವರೆಗೂ ಸರ್ಕಾರಕ್ಕೆ ಆತಂಕ ಇಲ್ಲ
ಹಾಸನ: ಸಿದ್ದರಾಮಯ್ಯ ಹಾಗೂ ನಾನು ಇರುವವರೆಗೂ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.ಸಮ್ಮಿಶ್ರ ಸರ್ಕಾರ ಉಳಿಸುವ ಜವಾಬ್ದಾರಿ ನನಗೂ ಹಾಗೂ ಸಿದ್ದರಾಮಯ್ಯ ಅವರಿಗೂ ಇದೆ. ಆದ್ದರಿಂದ ರಾಜ್ಯದ ಸಮ್ಮಿಶ್ರ ಸರ್ಕಾರಕ್ಕೆ ಅಪಾಯವಿಲ್ಲ. ಅಪಾಯ ಎದುರಾಗಲು ಬಿಡುವುದೂ ಇಲ್ಲ ಎಂದು ತಿಳಿಸಿದ್ದಾರೆ. ಹಾಸನದಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಉಸಿರಿರುವವರೆಗೂ ಸರ್ಕಾರ ಉರುಳಿಸಲು ಬಿಡಲ್ಲ ಎಂದು ಸಿದ್ದರಾಮಯ್ಯ ಸಹ ಹೇಳಿದ್ದಾರೆ. ಇನ್ನಾದರೂ ಬಿಜೆಪಿಯವರು ರಾಜಕೀಯ ಅಸ್ಥಿರತೆ ಸೃಷ್ಟಿಸುವುದು ಕೈ ಬಿಡಬೇಕು ಎಂದರು. ಅಷ್ಟೇ ಅಲ್ಲ, ಸಿದ್ದರಾಮಯ್ಯ ಮತ್ತು ನಾನು ಒಂದು ಕಾಲದ ಸ್ನೇಹಿತರು. ನಮಗಿಬ್ಬರಿಗೂ ಜವಾಬ್ದಾರಿಯಿದೆ ಎಂದು ಹೇಳಿದರು. ಅತೃಪ್ತರ ಹಿಡಿದಿಟ್ಟುಕೊಳ್ಳಲು ಯತ್ನ
ಅತೃಪ್ತ ಕಾಂಗ್ರೆಸ್ ಶಾಸಕರ ಮನವೊಲಿಕೆ ಹಾಗೂ ಹಿಡಿದಿಟ್ಟುಕೊಳ್ಳುವ ಕಸರತ್ತು ಭಾನುವಾರವೂ ಮುಂದುವರಿದಿದ್ದು, ಚೆನ್ನೈಗೆ ಹೋಗಿದ್ದ ಮೂವರು ಶಾಸಕರು ನಗರಕ್ಕೆ ವಾಪಸ್ ಆಗಿದ್ದಾರೆ. ಎಂ.ಟಿ.ಬಿ.ನಾಗರಾಜ್ ಜತೆ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಸುಧಾಕರ್ ಜತೆ ಸಿದ್ದರಾಮಯ್ಯ ಮಾತನಾಡಿ ಆತುರದ ತೀರ್ಮಾನ ಕೈಗೊಳ್ಳದಂತೆ ಮನವೊಲಿಕೆ ಪ್ರಯತ್ನ ಮಾಡಿದ್ದಾರೆ. ಮತ್ತೂಂದೆಡೆ ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್ ಜತೆಗೂ ಸಿದ್ದರಾಮಯ್ಯ ಮಾತನಾಡಿ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಅವಕಾಶ ಕಲ್ಪಿಸುವ ಭರವಸೆಯನ್ನೂ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.