Advertisement

ಸಚಿವರೊಂದಿಗೆ ವೇಣುಗೋಪಾಲ್‌ ಸಭೆ

02:26 PM Mar 30, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಿಕೊಂಡು ಬರುವ ಕುರಿತು ಪಕ್ಷದ ಸಚಿವರಿಗೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಸೂಚನೆ ನೀಡಿದ್ದಾರೆ.

Advertisement

ಶುಕ್ರವಾರ ರಾತ್ರಿ ಸಚಿವರು, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಉಪ ಮುಖ್ಯಮಂತ್ರಿ ಪರಮೇಶ್ವರ್‌, ಪ್ರಚಾರ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ್‌ ಸಮ್ಮುಖದಲ್ಲಿ ಸಚಿವರೊಂದಿಗೆ ಸಭೆ ನಡೆಸಿ, ಸಚಿವರುಗಳು ತಮಗೆ ಜವಾಬ್ದಾರಿ ವಹಿಸುವ ಕ್ಷೇತ್ರಗಳಲ್ಲಿ ಮೈತ್ರಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರಲು ಶ್ರಮಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next